ಮುಂಬೈ (ಮಹಾರಾಷ್ಟ್ರ): ನಗರದಲ್ಲಿ ನಿನ್ನೆ ನಾಲ್ಕು ಅಂತಸ್ತಿನ ಕಟ್ಟಡ ಕುಸಿದಿತ್ತು. ಈ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 19ಕ್ಕೆ ಏರಿಕೆ ಆಗಿದೆ. ಕುರ್ಲಾದ ನಾಯಕ್ ನಗರದಲ್ಲಿ ಈ ದುರ್ಘಟನೆ ನಡೆದಿದ್ದು, ಅಗ್ನಿಶಾಮಕ ದಳ ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯ ಕೈಗೊಂಡಿತ್ತು.
ಧರೆಗುರುಳಿದ ನಾಲ್ಕು ಅಂತಸ್ತಿನ ಕಟ್ಟಡ ಮುಂಬೈನ ಕುರ್ಲಾದ ನಾಯಕ್ ನಗರದಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದಿತ್ತು. ಇದೀಗ ಕಟ್ಟಡ ಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 19 ಕ್ಕೆ ಏರಿದೆ. ಘಟನೆ ಹಿನ್ನೆಲೆಯಲ್ಲಿ ಸಂತಾಪ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ, ಪ್ರಧಾನಿಗಳ ಪರಿಹಾರ ನಿಧಿಯಿಂದ ಮೃತ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
ಧರೆಗುರುಳಿದ ನಾಲ್ಕು ಅಂತಸ್ತಿನ ಕಟ್ಟಡ ಸುದ್ದಿ ತಿಳಿದಾಕ್ಷಣ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಮೃತ ಕುಟುಂಬಗಳಿಗೆ ಐದು ಲಕ್ಷ ಮತ್ತು ಗಾಯಾಳುಗಳಿಗೆ ಒಂದು ಲಕ್ಷ ಪರಿಹಾರವನ್ನು ಶಾಸಕ ಮಂಗೇಶ್ ಕುಡ್ಕಲರ್ ಘೋಷಿಸಿದ್ದಾರೆ.
ಓದಿ:ನಿರ್ಮಾಣ ಹಂತದ ಗೋಡೆ ಕುಸಿದು ಕಾರ್ಮಿಕ ಸಾವು, ಇಬ್ಬರಿಗೆ ಗಾಯ
ಈಗಾಗಲೇ ಹಲವರನ್ನು ರಕ್ಷಿಸಲಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಎಂಸಿ ನಾಲ್ಕೂ ಕಟ್ಟಡಗಳಿಗೆ ನೋಟಿಸ್ ಜಾರಿ ಮಾಡಿತ್ತು. ಆದರೆ ಇಲ್ಲಿ ಇನ್ನೂ ಕೆಲವು ಜನರು ವಾಸಿಸುತ್ತಿದ್ದರು. ಅಷ್ಟರಲ್ಲಿ ದುರಂತ ಸಂಭವಿಸಿದೆ. ಕಟ್ಟಡದ ಅವಶೇಷಗಳಡಿ ಸಿಲುಕಿರುವ ಎಲ್ಲ ಜನರನ್ನು ರಕ್ಷಿಸುವುದು ಮೊದಲ ಆದ್ಯತೆಯಾಗಿದೆ. ಇಂತಹ ಘಟನೆಗಳು ನಡೆಯದಂತೆ ಎಚ್ಚೆತ್ತ ಬಿಎಂಸಿ ನೋಟಿಸ್ ನೀಡುತ್ತದೆ. ಬಿಎಂಸಿ ನೋಟಿಸ್ ನೀಡಿದ ಕೂಡಲೇ ಜಾಗ ಖಾಲಿ ಮಾಡುವಂತೆ ಜನತೆಗೆ ಸಚಿವ ಆದಿತ್ಯ ಠಾಕ್ರೆ ಮನವಿ ಮಾಡಿದ್ದಾರೆ.