ನವದೆಹಲಿ: ಈಶಾನ್ಯ ದೆಹಲಿಯ ನಂದನಗ್ರಿ ಪ್ರದೇಶದಲ್ಲಿ ಶನಿವಾರ ಮೂರು ಅಂತಸ್ತಿನ ಕಟ್ಟಡ ಕುಸಿದಿದೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಅನೇಕ ಜನರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ನಂದ್ ನಾಗ್ರಿ ಪ್ರದೇಶಲ್ಲಿ ಕಟ್ಟಡ ಕುಸಿತ : ಅಗ್ನಿಶಾಮಕ ದಳದಿಂದ ರಕ್ಷಣಾ ಕಾರ್ಯ - ಮೂರು ಅಂತಸ್ತಿನ ಕಟ್ಟಡ ಕುಸಿತ
ದೆಹಲಿಯ ನಂದ್ ನಾಗ್ರಿ ಪ್ರದೇಶದಲ್ಲಿ ಶನಿವಾರ ಕಟ್ಟಡ ಕುಸಿತ ಉಂಟಾಗಿದ್ದು, ಸ್ಥಳದಲ್ಲಿ ಮೂರು ಅಗ್ನಿಶಾಮಕ ವಾಹನಗಳು ರಕ್ಷಣಾ ಕಾರ್ಯಾಚರಣೆ ಕೈಗೊಂಡಿವೆ..
ಕಟ್ಟಡ ಕುಸಿತ
ಪೊಲೀಸರು, ನಗರಸಭೆ ಅಧಿಕಾರಿಗಳು ಮತ್ತು ಅಗ್ನಿ ಶಾಮಕ ದಳಗಳು ಸ್ಥಳಕ್ಕೆ ಆಗಮಿಸಿದ್ದು, ರಕ್ಷಣಾ ಕಾರ್ಯವನ್ನು ಆರಂಭಿಸಲಾಗಿದೆ. ಮೂಲಗಳ ಪ್ರಕಾರ, ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.
ಕಟ್ಟಡ ಶಿಥಿಲಗೊಂಡಿದೆ ಎಂದು ಹೇಳಲಾಗಿದೆ. ಸ್ಥಳೀಯರು ಸಹ ಕಟ್ಟಡದ ಅವಶೇಷಗಳನ್ನು ತೆರವುಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಸಾವು-ನೋವುಗಳ ಕುರಿತು ವರದಿಯಾಗಿಲ್ಲ,ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.