ಕರ್ನಾಟಕ

karnataka

ETV Bharat / bharat

ಹೊತ್ತಿ ಉರಿದ ಬಸ್​​: ಅದೃಷ್ಟವಶಾತ್​ ಪ್ರಯಾಣಿಕರೆಲ್ಲರೂ ಬಚಾವ್ - ಪೂರ್ಣಿಯಾದಲ್ಲಿ ಬಸ್​ಗೆ ಬೆಂಕಿ

ಪೂರ್ಣಿಯಾದಲ್ಲಿ ಪ್ರಯಾಣಿಕರಿದ್ದ ಚಲಿಸುತ್ತಿದ್ದ ಬಸ್​​​​ನಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡಿದೆ. ಆದರೆ, ಘಟನೆಯಲ್ಲಿ ಯಾವುದೇ ಸಾವು -ನೋವುಗಳಾಗಿರುವ ಬಗ್ಗೆ ವರದಿಯಾಗಿಲ್ಲ.

Fire in moving bus
ಚಲಿಸುತ್ತಿದ್ದ ಬಸ್​ನಲ್ಲಿ ಆಕಸ್ಮಿಕ ಬೆಂಕಿ

By

Published : Aug 21, 2021, 6:51 PM IST

ಬಿಹಾರ/ಪೂರ್ಣಿಯಾ:ಚಲಿಸುತ್ತಿದ್ದ ಬಸ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರೆಲ್ಲರನ್ನೂ ಸುರಕ್ಷಿತವಾಗಿ ಬಸ್​ನಿಂದ ಹೊರಗಿಳಿಸಲಾಗಿದೆ.

ಚಲಿಸುತ್ತಿದ್ದ ಬಸ್​ನಲ್ಲಿ ಆಕಸ್ಮಿಕ ಬೆಂಕಿ

ಸದರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಮೇಲ್ಸೇತುವೆಯಲ್ಲಿ ಇದ್ದಕ್ಕಿದ್ದಂತೆ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ. ಬಸ್​​​​ನಲ್ಲಿದ್ದ ಪ್ರಯಾಣಿಕರು ತಮ್ಮ ಜೀವವನ್ನು ಉಳಿಸಿಕೊಳ್ಳುವ ಆತುರದಲ್ಲಿ ಬಸ್​​​ನಿಂದ ಇಳಿದರು. ಬಸ್ಸಿನೊಳಗೆ ಎಷ್ಟು ಜನ ಇದ್ದರು ಎಂಬ ಬಗ್ಗೆ ತಿಳಿದು ಬಂದಿಲ್ಲ.

ಬೆಂಕಿ ಕಾಣಿಸಿಕೊಳ್ಳು ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ ಎಸಿ ವೈರ್ ಶಾರ್ಟ್ ಸರ್ಕ್ಯೂಟ್​​ನಿಂದಾಗಿ ಈ ಘಟನೆ ನಡೆದಿದೆ ಎಂದು ಊಹಿಸಲಾಗಿದೆ. ಈ ಬೆಂಕಿ ಅವಘಡದಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಸ್ಥಳೀಯರ ಸಹಾಯದಿಂದ ಬೆಂಕಿ ನಂದಿಸಲಾಯಿತು. ಮಾಹಿತಿ ನೀಡಿದರೂ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸ್​ ಸಿಬ್ಬಂದಿ ಭೇಟಿ ನೀಡಿಲ್ಲ ಎಂದು ಹೇಳಲಾಗಿದೆ.

ABOUT THE AUTHOR

...view details