ನವದೆಹಲಿ: ಕೇಂದ್ರ ಸರ್ಕಾರ ಸೋಮವಾರ ನಿವೃತ್ತ ಐಎಎಸ್ ಅಧಿಕಾರಿ ಬಿವಿಆರ್ ಸುಬ್ರಹ್ಮಣ್ಯಂ ಅವರನ್ನು ನೀತಿ ಆಯೋಗದ ನೂತನ ಸಿಇಒ ಆಗಿ ನೇಮಿಸಿದೆ. ಆಯೋಗದ ನೂತನ ಸಿಇಒ ಆಗಿ ಅವರ ನೇಮಕವನ್ನು ಕ್ಯಾಬಿನೆಟ್ ನೇಮಕಾತಿ ಸಮಿತಿ ಅನುಮೋದಿಸಿದೆ. ಈ ಹಿಂದಿನ ಸಿಇಒ ಪರಮೇಶ್ವರನ್ ಅಯ್ಯರ್ ಅವರು ಎರಡು ವರ್ಷಗಳ ಅವಧಿಗೆ ವಾಷಿಂಗ್ಟನ್ ಡಿಸಿಯಲ್ಲಿರುವ ವಿಶ್ವ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಕಾರ್ಯನಿರ್ವಾಹಕ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ. ಹೀಗಾಗಿ ಮುಖ್ಯಸ್ಥರ ಸ್ಥಾನ ತೆರವಾಗಿತ್ತು.
ಛತ್ತೀಸ್‌ಗಢ ಕೇಡರ್‌ನ 1987 ರ ಬ್ಯಾಚ್‌ನ ಐಎಎಸ್ ಅಧಿಕಾರಿ ಸುಬ್ರಹ್ಮಣ್ಯಂ ಅವರು ಮೂಲತಃ ಆಂಧ್ರಪ್ರದೇಶದವರು. ಇಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ ಪದವಿ ಹೊಂದಿದ್ದಾರೆ. ಅಲ್ಲದೇ, ಅನುಭವಿ ಅಧಿಕಾರಿ. ಈ ಹಿಂದೆ ಜಮ್ಮು ಮತ್ತು ಕಾಶ್ಮೀರದ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಪಿಎಂಒದಲ್ಲಿ ಜಂಟಿ ಕಾರ್ಯದರ್ಶಿಯಾಗಿ ಅನೇಕ ಅವಧಿಗಳಲ್ಲಿ ಕೆಲಸ ಮಾಡಿದ್ದಾರೆ. ಮುಖ್ಯವಾಗಿ ಜಮ್ಮು ಮತ್ತು ಕಾಶ್ಮೀರದ ಮುಖ್ಯ ಕಾರ್ಯದರ್ಶಿಯಾಗಿ ಹೆಸರುವಾಸಿಯಾಗಿದ್ದರು.