ನವದೆಹಲಿ: ಉತ್ತರ ಪ್ರದೇಶದ ಖತೌಲಿ ವಿಧಾನಸಭಾ ಕ್ಷೇತ್ರಕ್ಕೆ ಡಿಸೆಂಬರ್ 5 ರಂದು ಉಪಚುನಾವಣೆ ನಡೆಯಲಿದೆ ಎಂದು ಭಾರತದ ಚುನಾವಣಾ ಆಯೋಗ ಮಂಗಳವಾರ ಘೋಷಿಸಿದೆ. 2013ರ ಸೆಪ್ಟೆಂಬರ್‌ನಲ್ಲಿ ಕೆಲವು ರಾಜಕೀಯ ನಾಯಕರು ಉದ್ರೇಕಕಾರಿ ಭಾಷಣ ಮಾಡಿದ ನಂತರ ಪಶ್ಚಿಮ ಉತ್ತರ ಪ್ರದೇಶದ ಜಿಲ್ಲೆಯಲ್ಲಿ ಕೋಮುಗಲಭೆ ಭುಗಿಲೆದ್ದಿತ್ತು. ಗಲಭೆಯಲ್ಲಿ ಕನಿಷ್ಠ 60 ಜನರು ಸಾವನ್ನಪ್ಪಿದರು ಮತ್ತು 40,000 ಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡರು.
ಇದೇ 2013ರ ಮುಜಾಫರ್‌ನಗರ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಕಳೆದ ತಿಂಗಳು ಬಿಜೆಪಿ ಶಾಸಕ ವಿಕ್ರಮ್ ಸಿಂಗ್ ದೋಷಿ ಎಂದು ಸಾಬೀತಾಗಿದೆ. ಇದೇ ಪ್ರಕರಣದ ಸಲುವಾಗಿ ಸಿಂಗ್ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆಯ ಘೋಷಣೆಯಾಗಿದೆ. ಹಾಗಗಿ ಇದಕ್ಕೆ ಸಂಬಂಧಿಸಿ ಸಿಂಗ್ ಅವರನ್ನು ಶಾಸಕರಾಗಿ ಅನರ್ಹಗೊಳಿಸಲಾಗಿದೆ ಎಂದು ಉತ್ತರ ಪ್ರದೇಶ ವಿಧಾನಸಭೆಯ ಕಾರ್ಯದರ್ಶಿ ಸೂಚಿಸಿದ್ದಾರೆ.