ಕರ್ನಾಟಕ

karnataka

ETV Bharat / bharat

ಅಲ್ಪಾವಧಿ ಕೃಷಿ ಸಾಲದ ಮೇಲೆ ಶೇ.1.5ರಷ್ಟು ಬಡ್ಡಿ ಸಬ್ಸಿಡಿ ಮರುಸ್ಥಾಪನೆ: ಕೇಂದ್ರ ಸಂಪುಟ ಅನುಮೋದನೆ - Emergency Credit Line Guarantee Scheme

ಕೃಷಿ ಸಾಲ ನೀಡುವ ಎಲ್ಲ ಹಣಕಾಸು ಸಂಸ್ಥೆಗಳು ಶೇ.1.5ರ ಬಡ್ಡಿ ಸಬ್ಸಿಡಿಯನ್ನು ಪಡೆಯುತ್ತವೆ ಎಂದು ಕೇಂದ್ರ ಸಚಿವ ಸಂಪುಟದ ಸಭೆಯ ನಂತರ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ಧಾರೆ.

cabinet-approves-interest-subvention-of-short-term-agri-loan
ಅಲ್ಪಾವಧಿಯ ಕೃಷಿ ಸಾಲದ ಮೇಲೆ ಶೇ.1.5ರಷ್ಟು ಬಡ್ಡಿ ಸಬ್ಸಿಡಿ ಮರು ಸ್ಥಾಪನೆ: ಕೇಂದ್ರ ಸಂಪುಟ ಅನುಮೋದನೆ

By

Published : Aug 17, 2022, 9:28 PM IST

ನವದೆಹಲಿ:ಅನ್ನದಾತರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಅಲ್ಪಾವಧಿಯ ಕೃಷಿ ಸಾಲದ ಬಡ್ಡಿಗೆ ಸಹಾಯಧನ ಘೋಷಿಸಲಾಗಿದ್ದು 3 ಲಕ್ಷ ರೂ ವರೆಗಿನ ಸಾಲಕ್ಕೆ ಶೇ.1.5ರಷ್ಟು ಬಡ್ಡಿ ಸಬ್ಸಿಡಿ ನೀಡಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ.

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಲ್ಪಾವಧಿ ಕೃಷಿ ಸಾಲಗಳಿಗೆ ಬಡ್ಡಿ ಸಬ್ಸಿಡಿಯನ್ನು ಮರುಸ್ಥಾಪಿಸಲು ನಿರ್ಧರಿಸಲಾಗಿದೆ. ಕೃಷಿ ಕ್ಷೇತ್ರಕ್ಕೆ ಸಾಕಷ್ಟು ಸಾಲದ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಭೆಯ ನಂತರ ಕೇಂದ್ರ ಸಚಿವ ಅನುರಾಗ್ ಠಾಕೂರ್ ತಿಳಿಸಿದರು.

ಸಾರ್ವಜನಿಕ ವಲಯದ ಬ್ಯಾಂಕ್​ಗಳು, ಖಾಸಗಿ ವಲಯದ ಬ್ಯಾಂಕ್​ಗಳು, ಸಣ್ಣ ಹಣಕಾಸು ಬ್ಯಾಂಕುಗಳು, ಪ್ರಾದೇಶಿಕ ಗ್ರಾಮೀಣ ಬ್ಯಾಂಕ್​ಗಳು, ಸಹಕಾರಿ ಬ್ಯಾಂಕುಗಳು ಸೇರಿ ಕೃಷಿ ಸಾಲ ನೀಡುವ ಎಲ್ಲ ಹಣಕಾಸು ಸಂಸ್ಥೆಗಳು ಶೇ.1.5ರ ಬಡ್ಡಿ ಸಬ್ಸಿಡಿ ಪಡೆಯುತ್ತವೆ. ಈ ಯೋಜನೆಯು 2022-23 ಮತ್ತು 2024-25ನೇ ಆರ್ಥಿಕ ವರ್ಷದಲ್ಲಿ 3 ಲಕ್ಷ ರೂ.ಗಳೊಳಗಿನ ಕೃಷಿ ಸಾಲಗಳಿಗೆ ಅನ್ವಯಿಸುತ್ತದೆ ಎಂದು ಮಾಹಿತಿ ನೀಡಿದರು.

ಈ ನಿರ್ಧಾರದಿಂದ ಸರ್ಕಾರದ ಬಜೆಟ್ ಮೇಲೆ ರೂ.34,856 ಕೋಟಿ ರೂಪಾಯಿಗಳಷ್ಟು ಹೊರೆಯಾಗುತ್ತದೆ. ಆದರೆ, ಬಡ್ಡಿ ಸಬ್ಸಿಡಿಯಿಂದ ಕೃಷಿ ಕ್ಷೇತ್ರಕ್ಕೆ ಲಾಭವಾಗುವುದಲ್ಲದೇ, ಸಾಲ ನೀಡುವ ಸಂಸ್ಥೆಗಳು ಆರ್ಥಿಕವಾಗಿ ಚೇತರಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ಸಚಿವರು ವಿವರಿಸಿದರು.

ತುರ್ತು ಕ್ರೆಡಿಟ್ ಲೈನ್ ಗ್ಯಾರಂಟಿ: ಮತ್ತೊಂದೆಡೆ, ಆಸ್ಪತ್ರೆ ಮತ್ತು ಪ್ರವಾಸ ವಲಯಗಳಿಗೆ ಸಂಬಂಧಿಸಿದ ತುರ್ತು ಕ್ರೆಡಿಟ್ ಲೈನ್ ಗ್ಯಾರಂಟಿ ಯೋಜನೆಯ ವೆಚ್ಚವನ್ನು 50 ಸಾವಿರ ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿದೆ. ಒಟ್ಟಾರೆ 4.5 ಲಕ್ಷ ಕೋಟಿಗಳಿಂದ 5 ಲಕ್ಷ ಕೋಟಿ ರೂ.ಗಳಿಗೆ ಹೆಚ್ಚಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಹೆಚ್ಚುವರಿ ಮೊತ್ತವನ್ನು ಸೇವಾ ಸಂಬಂಧಿತ ವಲಯಗಳ ಸಂಸ್ಥೆಗಳಿಗೆ ಹಂಚಿಕೆ ಮಾಡಲಾಗುತ್ತದೆ.

2022-23ರ ಕೇಂದ್ರ ಬಜೆಟ್‌ನಲ್ಲಿ ತುರ್ತು ಕ್ರೆಡಿಟ್ ಲೈನ್ ಗ್ಯಾರಂಟಿ ಯೋಜನೆಯ ಮಿತಿಯನ್ನು ಹೆಚ್ಚಿಸಲು ಪ್ರಸ್ತಾಪಿಸಿತ್ತು. ಸೇವಾ ಸಂಬಂಧಿತ ವಲಯಗಳಲ್ಲಿ ಕೊರೊನಾ ಸಾಂಕ್ರಾಮಿಕ ರೋಗದಿಂದ ಉಂಟಾದ ತೊಂದರೆಗಳಿಂದಾಗಿ ಈ ಮೊತ್ತವನ್ನು ಹೆಚ್ಚಿಸಲಾಗಿದೆ. ಅಲ್ಲದೇ, ಈ ಕ್ರೆಡಿಟ್ ಲೈನ್ ಗ್ಯಾರಂಟಿ ಯೋಜನೆಯಡಿ 2022ರ ಆಗಸ್ಟ್ 5ರವರೆಗೆ ಸುಮಾರು 3.67 ಲಕ್ಷ ಕೋಟಿ ಸಾಲಗಳನ್ನು ಮಂಜೂರು ಮಾಡಲಾಗಿದೆ ಎಂದು ಸಚಿವ ಅನುರಾಗ್ ತಿಳಿಸಿದರು.

ಇದನ್ನೂ ಓದಿ:ಪ್ರಧಾನಿ ಮೋದಿ ಭದ್ರತೆಗೆ ಮುಧೋಳ ಶ್ವಾನಗಳು: ಎರಡು ಮರಿಗಳನ್ನು ದೆಹಲಿಗೆ ಕೊಂಡೊಯ್ದ ಎಸ್​ಪಿಜಿ

ABOUT THE AUTHOR

...view details