ನವದೆಹಲಿ:ಔಷಧ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಸಹಕಾರ ಕುರಿತು ಭಾರತ ಮತ್ತು ಇಸ್ರೇಲ್ ನಡುವೆ ತಿಳುವಳಿಕೆ ಒಪ್ಪಂದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಸಹಿ ಹಾಕಿದೆ.
ವೈದ್ಯರು ಮತ್ತು ಇತರ ಆರೋಗ್ಯ ವೃತ್ತಿಪರರ ಕ್ಷೇತ್ರಗಳಲ್ಲಿ ಸಹಕಾರಕ್ಕಾಗಿ ಒಪ್ಪಂದದಲ್ಲಿ ಉಲ್ಲೇಖಿಸಲಾಗಿದೆ ಎಂದು ಕೇಂದ್ರ ಸಚಿವ ಸಂಪುಟ ಸ್ಪಷ್ಟನೆ ನೀಡಲಾಗಿದೆ.
ಈ ಒಪ್ಪಂದದ ಪ್ರಕಾರ ಮಾನವ ಸಂಪನ್ಮೂಲಗಳ ಅಭಿವೃದ್ಧಿಗೆ ಸಹಾಯ ಮತ್ತು ಆರೋಗ್ಯ ಸೌಲಭ್ಯಗಳ ಸ್ಥಾಪನೆ, ಔಷಧೀಯ, ವೈದ್ಯಕೀಯ ಸಾಧನಗಳು ಮತ್ತು ಸೌಂದರ್ಯವರ್ಧಕಗಳ ನಿಯಂತ್ರಣಕ್ಕೆ ಸಂಬಂಧಿಸಿದ ಮಾಹಿತಿ ವಿನಿಮಯ, ಸಾರ್ವಜನಿಕ ಆರೋಗ್ಯಕ್ಕೆ ಸಂಬಂಧಿಸಿದ ವಿಚಾರಗಳನ್ನು ವಿನಿಮಯ ಮಾಡಿಕೊಳ್ಳಲಾಗುತ್ತದೆ.
ಹವಾಮಾನ ವಿಚಾರಕ್ಕೂ ಸಂಬಂಧಿಸಿದಂತೆ ಕೆಲವೊಂದು ಮಾಹಿತಿ ಹಂಚಿಕೊಳ್ಳಲಾಗುತ್ತದೆ. ವಿವಿಧ ಕ್ಷೇತ್ರಗಳಲ್ಲಿ ಪರಸ್ಪರ ಸಂಶೋಧನೆಗಳನ್ನು ಉತ್ತೇಜಿಸಲು ಕ್ರಮ ಕೈಗೊಳ್ಳಬೇಕೆಂದು ಈ ಒಪ್ಪಂದದಲ್ಲಿ ಹೇಳಲಾಗಿದೆ.
ಇದರ ಜೊತೆಗೆ ಎರಡೂ ದೇಶಗಳು ಸಭೆಗಳು, ಸೆಮಿನಾರ್ಗಳು, ವಿಚಾರ ಸಂಕಿರಣಗಳು, ಕಾರ್ಯಾಗಾರಗಳು ಹಾಗೂ ಸಹಕಾರದ ವಿಷಯಗಳ ಕುರಿತ ಸಮ್ಮೇಳನಗಳನ್ನು ಆಯೋಜಿಸಬೇಕೆಂದು ಸಚಿವ ಸಂಪುಟ ಬಿಡುಗಡೆಗೊಳಿಸಿದ ಮಾಧ್ಯಮ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.