ಕರ್ನಾಟಕ

karnataka

ETV Bharat / bharat

ಬರ್ಬರ ಕೊಲೆ: ಸಚಿವರ ಆಪ್ತ ಸಹಾಯಕನಿಗೆ ಗುಂಡಿಕ್ಕಿ ಹತ್ಯೆ! - ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ

UP cabinet minister's PA shot dead: ಉತ್ತರ ಪ್ರದೇಶ ಸಚಿವರಾಗಿ ಸೇವೆ ಸಲ್ಲಿಸುತ್ತಿರುವ ಲಕ್ಷ್ಮಿ ನಾರಾಯಣ ಚೌಧರಿ ಅವರ ಆಪ್ತ ಸಹಾಯಕನ ಮೇಲೆ ಗುಂಡಿನ ದಾಳಿ ನಡೆಸಿ ಕೊಲೆ ಮಾಡಿರುವ ಘಟನೆ ಮಥುರಾದಲ್ಲಿ ನಡೆದಿದೆ.

minister Laxmi Narayan Choudhary's aide shot
minister Laxmi Narayan Choudhary's aide shot

By

Published : Jan 29, 2022, 5:55 PM IST

ಮಥುರಾ(ಉತ್ತರ ಪ್ರದೇಶ): ಉತ್ತರ ಪ್ರದೇಶ ಯೋಗಿ ಆದಿತ್ಯನಾಥ್​​​ ಸಂಪುಟದಲ್ಲಿ ಕ್ಯಾಬಿನೆಟ್​​ ಸಚಿವರಾಗಿರುವ ಲಕ್ಷ್ಮಿ ನಾರಾಯಣ ಚೌಧರಿ ಅವರ ಆಪ್ತ ಸಹಾಯಕನಿಗೆ ಗುಂಡಿಕ್ಕಿ ಕೊಲೆ ಮಾಡಲಾಗಿದೆ. ವಿಧಾನಸಭೆ ಚುನಾವಣೆ ಹತ್ತಿರದಲ್ಲಿರುವಾಗಲೇ ಈ ಕೃತ್ಯ ನಡೆದಿರುವುದು ಅನೇಕ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಪೈಗೊನ್ ಗ್ರಾಮದ ಸರಪಂಚ್​ ಆಗಿ ಕೂಡ ಸೇವೆ ಸಲ್ಲಿಸುತ್ತಿರುವ ರಾಮವೀರ್​​​ ಮೇಲೆ ಗುಂಡಿನ ದಾಳಿ ನಡೆಸಿ, ಹತ್ಯೆ ಮಾಡಿದ್ದಾರೆ ದುಷ್ಕರ್ಮಿಗಳು. ಕೋಸಿಕಲಾ ಪೊಲೀಸ್ ಠಾಣಾ ವ್ಯಾಪ್ತಿಯ ಶನಿದೇವ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ.

ಇದನ್ನೂ ಓದಿರಿ:18 ವರ್ಷದ ಯುವತಿ ಮೇಲೆ ಅತ್ಯಾಚಾರ.. ಅಶ್ಲೀಲ ವಿಡಿಯೋ ಹರಿಬಿಟ್ಟ ಕಾಮುಕನ ಬಂಧನ

ಘಟನಾ ಸ್ಥಳಕ್ಕೆ ಈಗಾಗಲೇ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮಾತನಾಡಿರುವ ಮಥುರಾ ಗ್ರಾಮಾಂತರ ಎಸ್​ಪಿ ಶ್ರೀಶ್​ ಚಂದ್​, ಶನಿದೇವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಕೆ ಮಾಡಿ ಮನೆಗೆ ತೆರಳುತ್ತಿದ್ದ ವೇಳೆ ಬೈಕ್​ನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿ, ಕೊಲೆ ಮಾಡಿದ್ದಾರೆ.

ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳ ಬಂಧನಕ್ಕಾಗಿ ಈಗಾಗಲೇ ಬಲೆ ಬೀಸಿದ್ದು, ಮೂರು ತಂಡ ರಚನೆ ಮಾಡಲಾಗಿದೆ ಎಂದಿದ್ದಾರೆ. 2022ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಮಥುರಾದ ಛಾತಾ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಲಕ್ಷ್ಮಿ ನಾರಾಯಣ ಕಣಕ್ಕಿಳಿದಿದ್ದಾರೆ. ಇವರ ಆಪ್ತ ಸಹಾಯಕರಾಗಿ ರಾಮವೀರ್ ಕೆಲಸ ಮಾಡುತ್ತಿದ್ದರು.

ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ABOUT THE AUTHOR

...view details