ಕರ್ನಾಟಕ

karnataka

ETV Bharat / bharat

ಕರ್ನಾಟಕ ಸೇರಿ ಕೆಲ ರಾಜ್ಯದಲ್ಲಿ ಕೋವಿಡ್​ ಹೆಚ್ಚಳ.. ದೆಹಲಿಯಲ್ಲಿ ಉನ್ನತ ಮಟ್ಟದ ಸಭೆ - ಮಹಾರಾಷ್ಟ್ರ ಕೋವಿಡ್​

ಕರ್ನಾಟಕ, ಮಹಾರಾಷ್ಟ್ರ ಸೇರಿ ಕೆಲವೊಂದು ರಾಜ್ಯಗಳಲ್ಲಿ ಕಳೆದ ಕೆಲ ದಿನಗಳಿಂದ ಕೋವಿಡ್ ಸೋಂಕಿತ ಪ್ರಕರಣ ಹೆಚ್ಚಾಗಿ ಕಂಡು ಬರುತ್ತಿರುವ ಕಾರಣ ಕೇಂದ್ರ ಕ್ಯಾಬಿನೆಟ್ ಕಾರ್ಯದರ್ಶಿ ವಿವಿಧ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

Cabinet Secretary Rajiv Gauba
Cabinet Secretary Rajiv Gauba

By

Published : Feb 27, 2021, 7:18 PM IST

ನವದೆಹಲಿ:ಕಳೆದ ಕೆಲ ದಿನಗಳಿಂದ ಕೆಲವೊಂದು ರಾಜ್ಯಗಳಲ್ಲಿ ಎರಡನೇ ಹಂತದ ಕೋವಿಡ್ ಅಲೆ ಶುರುವಾಗಿದೆ. ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಕ್ಯಾಬಿನೆಟ್​​ ಕಾರ್ಯದರ್ಶಿ ರಾಜೀವ್​ ಗೌಬಾ ವಿವಿಧ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶದ ಮುಖ್ಯ ಕಾರ್ಯದರ್ಶಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದರು.

ಮಹಾರಾಷ್ಟ್ರ, ಪಂಜಾಬ್​, ಗುಜರಾತ್​, ಮಧ್ಯಪ್ರದೇಶ, ಛತ್ತೀಸಗಢ, ಪಶ್ಚಿಮ ಬಂಗಾಳ, ತೆಲಂಗಾಣ ಹಾಗೂ ಜಮ್ಮು-ಕಾಶ್ಮೀರದಲ್ಲಿ ಹೆಚ್ಚಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ಇದರ ಜತೆಗೆ ಕರ್ನಾಟಕ, ತಮಿಳುನಾಡಿನಲ್ಲೂ ಇದೀಗ ಹೆಚ್ಚಿನ ಪ್ರಕರಣ ದಾಖಲಾಗುತ್ತಿವೆ. ಹೀಗಾಗಿ ಇಂದಿನ ಸಭೆ ಮಹತ್ವ ಪಡೆದಕೊಂಡಿತ್ತು.

ಇದನ್ನೂ ಓದಿ: ಬಾಂಗ್ಲಾ ವಿಮೋಚನೆ ಯುದ್ದಕ್ಕೆ 50 ವರ್ಷ: ವಿಮಾನಗಳ ವಿನಿಮಯ

ಇಂದಿನ ಸಭೆಯಲ್ಲಿ ವಿವಿಧ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು, ಹಿರಿಯ ಆರೋಗ್ಯ ಅಧಿಕಾರಿಗಳು ಭಾಗಿಯಾಗಿದ್ದರು. ಈ ವೇಳೆ ಕೋವಿಡ್ ನಿಯಂತ್ರಣಕ್ಕೆ ತುರ್ತು ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ತಿಳಿದು ಬಂದಿದೆ. ಗುಜರಾತ್​, ಮಹಾರಾಷ್ಟ್ರದಲ್ಲಿ ಕೋವಿಡ್ ಹಾವಳಿ ಜೋರಾಗಿರುವ ಕಾರಣ ಕೆಲವೊಂದು ಜಿಲ್ಲೆಗಳಲ್ಲಿ ಲಾಕ್​ಡೌನ್ ಹೇರಿಕೆ ಮಾಡಲಾಗಿದ್ದು, ಮಹತ್ವದ ನಿರ್ಬಂಧ ಹೇರಲಾಗಿದೆ.

ABOUT THE AUTHOR

...view details