ಭದೋಹಿ(ಉತ್ತರ ಪ್ರದೇಶ): ಅಗತ್ಯವಿದ್ದರೆ ಸದ್ಯಕ್ಕೆ ರದ್ದುಗೊಳಿಸಲಾಗುತ್ತಿರುವ ಮೂರು ಕೃಷಿ ಸಂಬಂಧಿ ಕಾನೂನುಗಳನ್ನು ಮತ್ತೆ ಜಾರಿ ಮಾಡಬಹುದು ಎಂದು ರಾಜಸ್ಥಾನದ ರಾಜ್ಯಪಾಲ ಕಲ್ರಾಜ್ ಮಿಶ್ರಾ (Rajasthan Governor Kalraj Mishra) ಹೇಳಿದ್ದಾರೆ.
ಉತ್ತರ ಪ್ರದೇಶದಲ್ಲಿ ಎಎನ್ಐ ಜೊತೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕೃಷಿ ಕಾನೂನುಗಳ ಬಗ್ಗೆ ರೈತರಿಗೆ ಮನವರಿಕೆ ಮಾಡಲು ಪ್ರಯತ್ನಿಸಿ, ಸೋತಿದೆ. ಆದರೂ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರ ನಿರ್ಧಾರ ಅತ್ಯಂತ ಶ್ಲಾಘನೀಯ. ಅನಿವಾರ್ಯವಾದರೆ ಮತ್ತೆ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಬಹುದು ಎಂದರು.
ಕೃಷಿ ಕಾಯ್ದೆಗಳನ್ನು ರದ್ದು ಮಾಡುವ ಮೂಲಕ ಕೇಂದ್ರ ಸರ್ಕಾರ ಸರಿಯಾದ ಹೆಜ್ಜೆ ಇಟ್ಟಿದೆ. ರೈತರು ಆಕ್ರೋಶ ವ್ಯಕ್ತಪಡಿಸಿದ್ದರ ಸಲುವಾಗಿ ಕಾನೂನುಗಳನ್ನು ಹಿಂಪಡೆಯುವುದು ಸೂಕ್ತ ಎಂದು ಕೇಂದ್ರ ಸರ್ಕಾರ ಪರಿಗಣಿಸಿದೆ ಕಲ್ರಾಜ್ ಮಿಶ್ರಾ ಹೇಳಿದರು.