ಕರ್ನಾಟಕ

karnataka

ETV Bharat / bharat

ಕೋವಿಡ್ -19 ಲಸಿಕೆ ಪೂರೈಸುವಂತೆ ಮೋದಿಗೆ ಮನವಿ ಮಾಡಿದ ಕೆನಡಾ ಪ್ರಧಾನಿ - ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ

ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ ಸಂಜೆ ಕರೆ ಮಾಡಿ, ಕೋವಿಡ್-19 ಮತ್ತು ಆರ್ಥಿಕ ಬಿಕ್ಕಟ್ಟು ಕುರಿತಂತೆ ಮಾತುಕತೆ ನಡೆಸಿದರು.

ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ

By

Published : Feb 11, 2021, 1:11 PM IST

ನವದೆಹಲಿ: ಕೆನಡಾ ಪ್ರಧಾನ ಮಂತ್ರಿ ಶ್ರೀ ಜಸ್ಟಿನ್ ಟ್ರುಡೊ ಅವರೊಂದಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ನಿನ್ನೆ ಸಂಜೆ ದೂರವಾಣಿ ಮೂಲಕ ಮಾತುಕತೆ ನಡೆಸಿದರು.

ಉಭಯ ನಾಯಕರು ತಮ್ಮ ದೇಶಗಳಲ್ಲಿ ಕೋವಿಡ್ -19 ಸಾಂಕ್ರಾಮಿಕಕ್ಕೆ ಸಂಬಂಧಿಸಿದ ಪರಿಸ್ಥಿತಿಯ ಬಗ್ಗೆ ಪರಸ್ಪರ ಮಾಹಿತಿ ವಿನಿಮಯ ಮಾಡಿಕೊಂಡರು. ಮತ್ತು ಆರೋಗ್ಯ ಮತ್ತು ಆರ್ಥಿಕ ಬಿಕ್ಕಟ್ಟನ್ನು ಪರಿಹರಿಸಲು ಅಂತಾರಾಷ್ಟ್ರೀಯ ಸಹಯೋಗದ ಸಾಧ್ಯತೆಗಳ ಬಗ್ಗೆ ಚರ್ಚಿಸಿದರು.

ಭಾರತ-ಕೆನಡಾ ಸಹಭಾಗಿತ್ವವು ಕೋವಿಡ್ ನಂತರದ ಜಗತ್ತಿನಲ್ಲಿ ಜಾಗತಿಕವಾಗಿ ಮಾನವೀಯ ಮೌಲ್ಯಗಳನ್ನು ಮುನ್ನಡೆಸುವುದೂ ಸೇರಿದಂತೆ ಒಳ್ಳೆಯತನಕ್ಕೆ ಒಂದು ಶಕ್ತಿಯಾಗಬಹುದು. ಆರೋಗ್ಯ, ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಕುರಿತು ವಿವಿಧ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ನಿಕಟವಾಗಿ ಕೆಲಸ ಮಾಡಲು ಒಪ್ಪಿಗೆ ಸೂಚಿಸಿ, ಟ್ರುಡೋ ಅವರು ಭಾರತದಿಂದ ಕೋವಿಡ್-19 ಲಸಿಕೆಗಳ ಅಗತ್ಯದ ಬಗ್ಗೆ ಪ್ರಧಾನಿ ಮೋದಿ ಅವರಿಗೆ ಮಾಹಿತಿ ನೀಡಿದರು.

ಇನ್ನು ಕೆನಡಾ ಕೇಳಿರುವಷ್ಟು ಕೋವಿಡ್ ಲಸಿಕೆಗಳನ್ನು ಪೂರೈಸಲು ಭಾರತ ತನ್ನ ಕೈಲಾದ ಪ್ರಯತ್ನ ಮಾಡಲಿದೆ ಎಂದು ಪ್ರಧಾನಿ ಮೋದಿ ಅವರು ಕೆನಡಾದ ಪ್ರಧಾನಿಗೆ ಭರವಸೆ ನೀಡಿದ್ದಾರೆ. ಜತೆಗೆ ಹವಾಮಾನ ಬದಲಾವಣೆ ಮತ್ತು ಜಾಗತಿಕ ಆರ್ಥಿಕ ಚೇತರಿಕೆಯಂತಹ ಇತರ ಪ್ರಮುಖ ವಿಚಾರಗಳಲ್ಲಿ ಸಹಭಾಗಿತ್ವ ಮುಂದುವರಿಸಲು ನಾವು ಒಪ್ಪಿಕೊಂಡಿದ್ದೇವೆ ಎಂದು ಮೋದಿ ತಿಳಿಸಿದ್ದಾರೆ.

ABOUT THE AUTHOR

...view details