ಹೈದರಾಬಾದ್ (ತೆಲಂಗಾಣ):ಹೊಸ ವರ್ಷಾಚರಣೆ ನಿಮಿತ್ತ ಮಾದಾಪುರದಲ್ಲಿ ಆಯೋಜಿಸಲಾಗಿದ್ದ ಸನ್ ಬರ್ನ್ ಕಾರ್ಯಕ್ರಮವನ್ನು ಸಂಘಟಕರು ರದ್ದುಗೊಳಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ, ಬುಕ್‌ಮೈ ಶೋನಲ್ಲಿ ಟಿಕೆಟ್‌ಗಳ ಮಾರಾಟ ಸಹ ನಿಲ್ಲಿಸಲಾಗಿದೆ. ಕಾರ್ಯಕ್ರಮ ಆಯೋಜಕ ಸುಮಂತ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅನುಮತಿ ಪಡೆಯದೇ ಟಿಕೆಟ್ ಮಾರಾಟ ಮಾಡಿದ್ದಕ್ಕೆ ಬುಕ್ ಮೈ ಶೋ ಹಾಗೂ ನೋಡಲ್ ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ. ಪ್ರಸ್ತುತ, 'ಸನ್ ಬರ್ನ್ ಶೋ ಹೈದರಾಬಾದ್' ಈವೆಂಟ್ ಬುಕ್ ಮೈ ಶೋನಲ್ಲಿ ಕಾಣಿಸುತ್ತಿಲ್ಲ.
ಆದ್ರೆ, ವಿಶಾಖಪಟ್ಟಣಂನಲ್ಲಿ ನಡೆಯಲಿರುವ ಸನ್ ಬರ್ನ್ ಕಾರ್ಯಕ್ರಮದ ಟಿಕೆಟ್‌ಗಳು ಮಾರಾಟವಾಗಿವೆ. ಸನ್‌ಬರ್ನ್ ಒಂದು ದೊಡ್ಡ ಸಂಗೀತ ಉತ್ಸವವಾಗಿದೆ. ದೇಶದ ಹಲವು ರಾಜ್ಯಗಳಲ್ಲಿ ಈ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ಸಮಾರಂಭದಲ್ಲಿ ಮದ್ಯಕ್ಕೆ ಅನುಮತಿ ನೀಡಲಾಗಿದೆ. ಇದರ ಜೊತೆಗೆ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂಬ ಆರೋಪವೂ ಕೇಳಿ ಬರುತ್ತಿದೆ.
ಬುಕ್ ಮೈ ಶೋ ಪ್ರತಿನಿಧಿಗಳ ತರಾಟೆ:ಈ ಹಿನ್ನೆಲೆಯಲ್ಲಿ ಭಾನುವಾರ ನಡೆದ ಜಿಲ್ಲಾಧಿಕಾರಿ ಹಾಗೂ ಎಸ್ಪಿಗಳ ಸಭೆಯಲ್ಲಿ ಈ ಕಾರ್ಯಕ್ರಮಕ್ಕೆ ಅನುಮತಿ ನೀಡಿದವರು ಯಾರು ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಪ್ರಶ್ನಿಸಿದರು. ಕೂಡಲೇ ಸೈಬರಾಬಾದ್ ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮದ ಆಯೋಜಕರು ಹಾಗೂ ಬುಕ್ ಮೈ ಶೋ (Book My Show) ಪ್ರತಿನಿಧಿಗಳನ್ನು ಕರೆಸಿ ತರಾಟೆ ತೆಗೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮ ನಿರ್ವಹಣೆಗೆ ಹಿನ್ನಡೆಯಾಗಿದೆ.