ಲಖನೌ (ಉತ್ತರ ಪ್ರದೇಶ): ಮುಂಬರುವ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು ಹೊರಟಿದ್ದ ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿಯಾಗಿರುವ ಬಿಜೆಪಿಯ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಪತ್ನಿ ಸಂಗೀತಾ ಸೆಂಗಾರ್ರ ನಾಮಪತ್ರವನ್ನು ಹಿಂಪಡೆಯಲಾಗಿದೆ.
ಪ್ರಸ್ತುತ ಉನ್ನಾವೋ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿರುವ ಸಂಗೀತಾರಿಗೆ ಫತೇಪುರ್ ಚೌರಾಸಿ ತೃತೀಯ ಕ್ಷೇತ್ರದಿಂದ ಕಣಕ್ಕಿಳಿಯಲು ಬಿಜೆಪಿ ಟಿಕೆಟ್ ನೀಡಿತ್ತು.
ಇದನ್ನೂ ಓದಿ: ಉನ್ನಾವೊ ಅತ್ಯಾಚಾರ ಪ್ರಕರಣದ ಅಪರಾಧಿಯ ಪತ್ನಿಗೆ ಬಿಜೆಪಿ ಟಿಕೆಟ್
ದೇಶವನ್ನೇ ಬೆಚ್ಚಿಬೀಳಿಸಿದ್ದ 2018ರ ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಅಂದಿನ ಬಿಜೆಪಿ ಶಾಸಕನಾಗಿದ್ದ ಕುಲದೀಪ್ ಸಿಂಗ್ ಸೆಂಗಾರ್ ದೋಷಿಯೆಂದು ಸಾಬೀತಾಗಿ ಸೆರೆವಾಸ ಅನುಭವಿಸುತ್ತಿದ್ದಾರೆ.
ಉತ್ತರ ಪ್ರದೇಶದಲ್ಲಿ ಏ.15 ರಿಂದ ಏ.29ರವರೆಗೆ ನಾಲ್ಕು ಹಂತಗಳಲ್ಲಿ ಪಂಚಾಯತ್ ಚುನಾವಣೆ ನಡೆಯಲಿದ್ದು, ಅಪರಾಧಿಯ ಪತ್ನಿಗೆ ಟಿಕೆಟ್ ನೀಡುತ್ತಿದ್ದಂತೆಯೇ ಎಲ್ಲೆಡೆ ಭಾರಿ ಆಕ್ರೋಶ ವ್ಯಕ್ತವಾಗಿತ್ತು.