ನವದೆಹಲಿ:ದೇಶದಲ್ಲಿ ಕ್ರಿಪ್ಟೋಕರೆನ್ಸಿ (Cryptocurrency) ಇನ್ನಿಲ್ಲದ ಚರ್ಚೆ ಹುಟ್ಟು ಹಾಕಿದ್ದು, ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಭಾರಿ ಕೋಲಾಹಲವನ್ನೂ ಸೃಷ್ಟಿಸಿದೆ.
ಇದೇ ವಿಚಾರವಾಗಿ ಕೇಂದ್ರ ಸರ್ಕಾರ ಕೂಡ ಎಚ್ಚೆತ್ತುಕೊಂಡಿದೆ. ಈ ಹಿಂದೆ, ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಉನ್ನತಮಟ್ಟದ ಸಭೆ ನಡೆಸಿ ಮಹತ್ವದ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಇಂದು ನಡೆದ ಸಂಸದೀಯ ಸಮಿತಿ (Parliamentary panel meet) ಸಭೆಯಲ್ಲೂ ಒಮ್ಮತದ ನಿರ್ಧಾರಕ್ಕೆ ಬರಲಾಗಿದೆ.
ಕ್ರಿಪ್ಟೋ ಬಗ್ಗೆ ಎಚ್ಚರಿಕೆ ನೀಡಿರುವ ಸಂಸದರು, ದೇಶದಲ್ಲಿ ಅದನ್ನು ನಿಲ್ಲಿಸುವುದು ಅಸಾಧ್ಯ. ಆದರೆ ನಿಯಂತ್ರಣದ ಅವಶ್ಯಕತೆ ಇದೆ ಎಂದು ಸಲಹೆ ನೀಡಿದ್ದಾರೆ. ಕ್ರಿಪ್ಟೋ ಕರೆನ್ಸಿ ಮಾರುಕಟ್ಟೆ, ಸರ್ಕಾರದ ನಿಯಂತ್ರಣದಲ್ಲಿ ಇಲ್ಲ. ಜೊತೆಗೆ ಯಾವುದೇ ಸಂಸ್ಥೆಯ ನಿಯಂತ್ರಣ ಕೂಡ ಇದರ ಮೇಲಿಲ್ಲ. ಹೀಗಾಗಿ ಅಗತ್ಯ ನಿಯಂತ್ರಣ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಒಮ್ಮತ ಮೂಡಿದೆ.