ಚಂಡೀಗಡ: ಪಂಜಾಬ್ ಕಾಂಗ್ರೆಸ್ ಘಟಕದಲ್ಲಿ ಉಲ್ಬಣಗೊಂಡಿರುವ ಬಂಡಾಯ ಶಮನವಾಗುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಈ ಹಿನ್ನೆಲೆ, ಕ್ಯಾಪ್ಟನ್ ಅಮರಿಂದರ್ ಸಿಂಗ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೈಕಮಾಂಡ್ ಸೂಚನೆಯಂತೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆಂದು ತಿಳಿದು ಬಂದಿದೆ.
ಸಿಎಂ ಸ್ಥಾನಕ್ಕೆ ಕ್ಯಾಪ್ಟನ್ ಅಮರಿಂದರ್ ಸಿಂಗ್ ರಾಜೀನಾಮೆ
ಸಿಎಲ್ಪಿ ಸಭೆಗೂ ಮುನ್ನ ಸಿಎಂ ಸ್ಥಾನಕ್ಕೆ ಕ್ಯಾಪ್ಟನ್ ಅಮರಿಂದರ್ ಸಿಂಗ್ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲರನ್ನ ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದರು.
ಕ್ಯಾಪ್ಟನ್ ಅಮರಿಂದರ್ ಸಿಂಗ್
ಕಳೆದ ಹಲವು ವರ್ಷಗಳಿಂದ ಪಂಜಾಬ್ ಕಾಂಗ್ರೆಸ್ನಲ್ಲಿ ಬಿರುಕು ಮೂಡಿತ್ತು. ಬಂಡಾಯ ಶಮನ ಮಾಡಲು ಹೈಕಮಾಂಡ್ ಎಷ್ಟೇ ಪ್ರಯತ್ನಿಸಿದರೂ, ಆಗುತ್ತಿಲ್ಲ. ಅಲ್ಲದೆ, ಅಂದಾಜು 40 ಕ್ಕೂ ಹೆಚ್ಚು ಶಾಸಕರು ನಮ್ಮ ಬೇಡಿಕೆಗಳನ್ನು ಈಡೇರಿಸಿ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿಗೆ ಪತ್ರ ಬರೆದಿದ್ದರು ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
ಇದನ್ನೂ ಓದಿ: ಮುಂದುವರಿದ ಪಂಜಾಬ್ ರಾಜಕೀಯ ಸಮರ.. ಇಂದು ಸಂಜೆ 5ಕ್ಕೆ ಮಹತ್ವದ CLP ಸಭೆ
Last Updated : Sep 18, 2021, 4:47 PM IST