ಶಾಹದೋಲ್(ಮಧ್ಯಪ್ರದೇಶ): ಚಂಡಿಯಾದಿಂದ ಮನೇಂದ್ರಗಢಕ್ಕೆ ಹೋಗುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದಿರುವ ಪರಿಣಾಮ ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದು, ಉಳಿದಂತೆ ಮೂವರು ಗಾಯಗೊಂಡಿದ್ದಾರೆ. ಈ ಅವಘಡಕ್ಕೆ ಕಾರಣವಾಗಿದ್ದು ಮಾತ್ರ ಇಲಿ ಎಂಬುದು ಎಲ್ಲರಿಗೂ ಆಶ್ಚರ್ಯ ಮೂಡಿಸಿದೆ.
ಪತಿ, ಪತ್ನಿ ಹಾಗೂ ಇಬ್ಬರು ಮಕ್ಕಳು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅದರೊಳಗಿದ್ದ ಇಲಿ ಏಕಾಏಕಿಯಾಗಿ ಕಾರಿನ ಡ್ಯಾಶ್ಬೋರ್ಡ್ ಬಳಿ ಬಂದಿದೆ. ಈ ವೇಳೆ ಕಾರು ಡ್ರೈವ್ ಮಾಡ್ತಿದ್ದ ವ್ಯಕ್ತಿಯ ಗಮನ ಬೇರೆಡೆ ಹೋಗಿದೆ. ವೇಗವಾಗಿ ಚಲಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಕೆಳಗಿಳಿದು, ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆಯಿತು. ಅಪಘಾತದ ರಭಸಕ್ಕೆ ಕಾರು ಸ್ಥಳದಲ್ಲೇ ಸ್ಫೋಟಗೊಂಡಿದೆ.