ಕಿಶನ್ಗಂಜ್ (ಚಂಡೀಗಢ):ಚಲಿಸುತ್ತಿದ್ದ ಕಾರಿನಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡು, ಕಾರು ಹೊತ್ತಿ ಉರಿದಿರುವ ಘಟನೆ ಚಂಡೀಗಢದ ಕಿಶನ್ಗಂಜ್ನಲ್ಲಿ ನಡೆದಿದೆ.
ಚಲಿಸುತ್ತಿದ್ದ ಕಾರ್ನಲ್ಲಿ ಹಠಾತ್ ಬೆಂಕಿ ಚಂಡೀಗಢ ಪೊಲೀಸ್ ಇಲಾಖೆಯಲ್ಲಿ ಕಾನ್ಸ್ಟೇಬಲ್ ಆಗಿರುವ ಯುವಕ, ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಈ ವೇಳೆ ಕಾರಿನಲ್ಲಿ ಅವರು ಏಕಾಂಗಿಯಾಗಿದ್ದರು.
ಇದನ್ನೂ ಓದಿ: ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ ಗಾಯಕಿ ಶ್ರೇಯಾ ಘೋಷಾಲ್
ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಅಗ್ನಿಶಾಮಕ ದಳಕ್ಕೆ ಫೋನ್ ಮಾಡಿ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕದಳ ಆಗಮಿಸಿ ಬೆಂಕಿ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದೆ. ಆದರೆ ಕಾರು ಈ ವೇಳೆಗೆ ಸಂಪೂರ್ಣವಾಗಿ ಹೊತ್ತಿ ಉರಿದಿತ್ತು ಎಂದು ತಿಳಿದು ಬಂದಿದೆ.