ನವದೆಹಲಿ: ಮುಸ್ಲಿಂ ಮಹಿಳೆಯರಿಗೆ ಸಂಬಂಧಿಸಿದಂತೆ ವಿವಾಹದ ಹಕ್ಕುಗಳ ರಕ್ಷಣೆ ಕಾಯ್ದೆ ಜಾರಿಗೆ ಬಂದ ನಂತರ ಶೇಕಡಾ 80 ರಷ್ಟು ತ್ರಿವಳಿ ತಲಾಖ್ ಪ್ರಕರಣಗಳು ಕಡಿಮೆಯಾಗಿವೆ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಮಾಹಿತಿ ನೀಡಿದ್ದಾರೆ.
ಎರಡು ವರ್ಷಗಳ ತ್ರಿವಳಿ ತಲಾಖ್ ಕಾಯ್ದೆ ರದ್ದತಿ ಸ್ಮರಣಾರ್ಥ ರಾಷ್ಟ್ರ ರಾಜಧಾನಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ನಖ್ವಿ, ಪ್ರಧಾನಿ ನರೇಂದ್ರ ಮೋದಿಯವರು ಕೊಟ್ಟ ಭರವಸೆಗಳನ್ನು ಈಡೇರಿಸಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರ ಸಮಸ್ಯೆಯನ್ನು ಪರಿಹರಿಸಲಾಗಿದೆ. ಜಮ್ಮುಕಾಶ್ಮೀರದ ಜನತೆ ಹಿತದೃಷ್ಟಿಯಿಂದ 370 ನೇ ವಿಧಿಯನ್ನು ರದ್ದುಗೊಳಿಸಲಾಗಿದೆ. ಮೊಹರಂ ಇಲ್ಲದೆ ಸುಮಾರು ಮೂರುವರೆ ಮುಸ್ಲಿಂ ಮಹಿಳೆಯರು ಹಜ್ ಯಾತ್ರೆ ಕೈಗೊಂಡಿದ್ದಾರೆ ಎಂದು ತಿಳಿಸಿದರು.
ಮುಸ್ಲಿಂ ಮಹಿಳೆಯರ (ವಿವಾಹದ ಹಕ್ಕುಗಳ ರಕ್ಷಣೆ) ಕಾಯ್ದೆ ಆಗಸ್ಟ್ 1, 2019 ರಿಂದ ಜಾರಿಗೆ ತರಲಾಗಿದ್ದು, ಇದರಿಂದಾಗಿ ಶೇಕಡಾ 80 ರಷ್ಟು ತಲಾಖ್ ಪ್ರಕರಣಗಳು ಕಡಿಮೆಯಾಗಿವೆ. ಈ ಕಾಯ್ದೆ ಜಾರಿಗೆ ಬಂದ ನಂತರ ಬಿಹಾರದಲ್ಲಿ 489 ಪ್ರಕರಣಗಳು ವರದಿಯಾಗಿದ್ದು, ಸದ್ಯ 221 ಕೇಸ್ಗಳಿವೆ ಎಂದು ಹೇಳಿದ್ದಾರೆ.