ನವದೆಹಲಿ:ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ರೈಲ್ವೆ ಉಪ ಮುಖ್ಯ ಇಂಜಿನಿಯರ್ ಅವರನ್ನು ಬಂಧಿಸಿರುವುದಾಗಿ ಮತ್ತು ದಾಳಿಯ ವೇಳೆ ಆರೋಪಿಯಿಂದ 1 ಕೋಟಿ ನಗದು ಸೇರಿ 2 ಕೋಟಿ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಕೇಂದ್ರ ತನಿಖಾ ದಳ (ಸಿಬಿಐ) ಮಂಗಳವಾರ ತಿಳಿಸಿದೆ. ಆರೋಪಿಯನ್ನು ಅರುಣ್ ಕುಮಾರ್ ಮಿತ್ತಲ್ ಎಂದು ಹೇಳಲಾಗುತ್ತಿದೆ.
ಆರೋಪಿಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದಾಗ 1 ಕೋಟಿ ರೂಪಾಯಿ ನಗದು, ಹಾಗೆ 38 ಲಕ್ಷ ರೂಪಾಯಿ ಮೌಲ್ಯದ ಹಣವನ್ನು ಬೇರೆ ಸ್ಥಳದಿಂದ ವಶಪಡಿಸಿಕೊಂಡಿದ್ದೇವೆ. ಇದಲ್ಲದೇ ಆರೋಪಿ ಹಾಗೂ ಅವನ ಕುಟುಂಬ ಸದಸ್ಯರ ಬ್ಯಾಂಕ್ ಖಾತೆಗಳಲ್ಲಿ 1.13 ಕೋಟಿ ರೂ. ಇರುವುದನ್ನು ಸಿಬಿಐ ಪತ್ತೆ ಹಚ್ಚಿದೆ.
11 ಲಕ್ಷ ಮೌಲ್ಯದ ಚಿನ್ನಾಭರಣ, ವಿವಿಧ ಆಸ್ತಿಗೆ ಸಂಬಂಧಿಸಿದ ದಾಖಲೆಗಳು, ಮತ್ತು ರೈಲ್ವೆ ಗುತ್ತಿಗೆದಾರರು ಸೇರಿದಂತೆ ವಿವಿಧ ಪಕ್ಷಗಳಿಗೆ ಸಂಬಂಧಿಸಿದ ವಿತ್ತೀಯ ವಹಿವಾಟುಗಳ ದಾಖಲೆಗಳನ್ನುಮರು ಪಡೆಯಲಾಗಿದೆ ಎಂದು ಹಿರಿಯ ತನಿಖಾ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.