ನವದೆಹಲಿ: ದೆಹಲಿ ಸರ್ಕಾರದ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳು ಸೇರಿದಂತೆ ಏಳು ಆರೋಪಿಗಳ ವಿರುದ್ಧ ಸಿಬಿಐ ಮೊದಲ ಚಾರ್ಜ್ಶೀಟ್ ಸಲ್ಲಿಸಿದೆ.
ದೆಹಲಿ ಅಬಕಾರಿ ನೀತಿ ಹಗರಣ: 7 ಜನರ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿದ ಸಿಬಿಐ - ಚಾರ್ಜ್ಶೀಟ್
ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದ ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಸಿಬಿಐ ಚಾರ್ಜ್ಶೀಟ್ ದಾಖಲಿಸಿದೆ.
ದೆಹಲಿ ಅಬಕಾರಿ ನೀತಿ ಹಗರಣ: 7 ಜನರ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿದ ಸಿಬಿಐ
ಸಿಬಿಐ ಚಾರ್ಜ್ಶೀಟ್ನಲ್ಲಿ ಈಗಾಗಲೇ ಬಂಧಿತ ಇಬ್ಬರು ಉದ್ಯಮಿಗಳು, ಸುದ್ದಿ ವಾಹಿನಿಯ ಮುಖ್ಯಸ್ಥ, ಹೈದರಾಬಾದ್ ಮೂಲದ ಮದ್ಯ ಉದ್ಯಮಿ, ದೆಹಲಿ ಮೂಲದ ಮದ್ಯ ವಿತರಕ ಮತ್ತು ಅಬಕಾರಿ ಇಲಾಖೆಯ ಇಬ್ಬರು ಅಧಿಕಾರಿಗಳು ಹೆಸರು ಉಲ್ಲೇಖಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಡಿಸಿಎಂ ಮನೀಶ್ ಸಿಸೋಡಿಯಾ ಕೇಳಿದ ಕಡತ ನೀಡಲು ಒಪ್ಪದ ದೆಹಲಿ ಕಾನೂನು ಇಲಾಖೆ?