ಕೋಲ್ಕತ್ತಾ (ಪಶ್ಚಿಮ ಬಂಗಾಳ): ವಿಧಾನಸಭೆ ಚುನಾವಣೆ ಬಳಿಕ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತೊಂದು ಪ್ರಕರಣವನ್ನು ದಾಖಲಿಸಿದೆ. ಸಿಬಿಐ ಪ್ರಕಾರ, ಹೊಸ ಪ್ರಕರಣವು ಈ ವರ್ಷದ ಮೇನಲ್ಲಿ ಪಶ್ಚಿಮ ಮೇದಿನಿಪುರ ಜಿಲ್ಲೆಯಲ್ಲಿ ನಡೆದ ಬಿಸ್ವಜಿತ್ ಮಹೇಶ್ ಹತ್ಯೆಗೆ ಸಂಬಂಧಿಸಿದೆ ಎಂದು ತಿಳಿಸಿದೆ.
ಈ ವರ್ಷ ಆಗಸ್ಟ್ 19ರಂದು ನೀಡಲಾದ ಕೋಲ್ಕತ್ತಾ ಹೈಕೋರ್ಟ್ ಆದೇಶವನ್ನು ಪಾಲಿಸಿ ಸಿಬಿಐ ಪ್ರಕರಣವನ್ನು ದಾಖಲಿಸಿದೆ. ಸಂಸ್ಥೆಯು ಇದುವರೆಗೆ 44 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, ಈ ಪ್ರಕರಣಗಳಲ್ಲಿ ತನಿಖೆ ಮುಂದುವರಿದಿದೆ. ಮೇ 2ರಂದು ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೆ ಪಶ್ಚಿಮ ಬಂಗಾಳದ ವಿವಿಧ ಸ್ಥಳಗಳಲ್ಲಿ ಹಿಂಸಾಚಾರ ಘಟನೆಗಳು ವರದಿಯಾಗಿದ್ದವು. ನಂತರ ಗೃಹ ಸಚಿವಾಲಯದಿಂದ ನಿಯೋಜಿಸಲಾದ ನಾಲ್ವರು ಸದಸ್ಯರ ತಂಡವು ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿತ್ತು.