ನವದೆಹಲಿ: ವೀಸಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಕಾರ್ತಿ ಚಿದಂಬರಂ ಅವರ ನಿಕಟವರ್ತಿ ಎಸ್.ಭಾಸ್ಕರ್ ರಾಮನ್ ಅವರನ್ನು ನಿನ್ನೆ ತಡರಾತ್ರಿ ವಿಚಾರಣೆ ನಡೆಸಿದ ಬಳಿಕ ಬಂಧಿಸಲಾಗಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ.
ಕಾಂಗ್ರೆಸ್ ನಾಯಕ ಕಾರ್ತಿ ಚಿದಂಬರಂ ಅವರಿಗೆ ಸೇರಿದ ಮುಂಬೈ ಮತ್ತು ಚೆನ್ನೈನಲ್ಲಿರುವ ಮನೆ ಹಾಗು ಕಚೇರಿಗಳ ಮೇಲೆ ಮಂಗಳವಾರ (ನಿನ್ನೆ) ಬೆಳಗ್ಗೆ ಕೇಂದ್ರ ತನಿಖಾ ದಳ (ಸಿಬಿಐ) ದಾಳಿ ನಡೆಸಿತ್ತು. ನಿಯಮ ಮೀರಿ ನೆಲೆಸಿದ್ದ 260ಕ್ಕೂ ಹೆಚ್ಚು ಚೀನಿ ಪ್ರಜೆಗಳಿಗೆ ವೀಸಾ ಕೊಡಿಸಿ ಅದಕ್ಕೆ ಪ್ರತಿಯಾಗಿ 50 ಲಕ್ಷ ರೂ. ಲಂಚ ಪಡೆದಿರುವ ಗಂಭೀರ ಆರೋಪ ಸಂಬಂಧ ಸಿಬಿಐ ಹೊಸ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ.