ಮುಂಬೈ: ಪರಂಬೀರ್ ಸಿಂಗ್ ಸಲ್ಲಿಸಿದ ದೂರು ಅನಿಲ್ ದೇಶ್ಮುಖ್ ಅವರ ಭ್ರಷ್ಟಾಚಾರ ಪ್ರಕರಣಕ್ಕೆ ಮಾತ್ರ ಸಂಬಂಧಿಸಿದೆ. ರಶ್ಮಿ ಶುಕ್ಲಾ ಫೋನ್ ಟ್ಯಾಪಿಂಗ್ ಮತ್ತು ಭ್ರಷ್ಟಾಚಾರ ಪ್ರಕರಣದ ದೂರಿಗೆ ಯಾವುದೇ ಸಂಬಂಧವಿಲ್ಲ. ಆದರೆ, ಸಿಬಿಐ ಇನ್ನೂ ರಶ್ಮಿ ಶುಕ್ಲಾ ಪ್ರಕರಣದ ತನಿಖೆ ನಡೆಸುತ್ತಿದೆ ಎಂದು ರಾಜ್ಯ ಸರ್ಕಾರ ನ್ಯಾಯಾಲಯದ ಗಮನಕ್ಕೆ ತಂದಿದೆ.
ಭ್ರಷ್ಟಾಚಾರ ಆರೋಪದಡಿ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ವಿರುದ್ಧ ದಾಖಲಾಗಿರುವ ಪ್ರಕರಣದ ವಿಚಾರಣೆಯನ್ನು ಸಿಬಿಐ ನಡೆಸುತ್ತಿದೆ. ಪ್ರಕರಣದಲ್ಲಿನ ಕೆಲ ವಿಚಾರಗಳನ್ನು ಕೈ ಬಿಡುವಂತೆ ಕೋರಿ ರಾಜ್ಯ ಸರ್ಕಾರ ಮತ್ತು ಅನಿಲ್ ದೇಶ್ಮುಖ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.