ಕರ್ನಾಟಕ

karnataka

ETV Bharat / bharat

ಅನಿಲ್​ ದೇಶ್​ಮುಖ್​ ಭ್ರಷ್ಟಾಚಾರ ಪ್ರಕರಣ: ಪ್ರಾಥಮಿಕ ತನಿಖೆ ಆರಂಭಿಸಲು 15 ದಿನ ಗಡುವು

ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್​ಮುಖ್ ವಿರುದ್ಧದ ಭ್ರಷ್ಟಾಚಾರದ ಆರೋಪದ ಬಗ್ಗೆ 15 ದಿನಗಳಲ್ಲಿ ಪ್ರಾಥಮಿಕ ತನಿಖೆ ಆರಂಭಿಸುವಂತೆ ಬಾಂಬೆ ಹೈಕೋರ್ಟ್ ಇಂದು ಸಿಬಿಐಗೆ ನಿರ್ದೇಶನ ನೀಡಿದೆ.

Bombay HC
ಬಾಂಬೆ ಹೈಕೋರ್ಟ್

By

Published : Apr 5, 2021, 1:20 PM IST

ಮುಂಬೈ: ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್​ಮುಖ್ ವಿರುದ್ಧ ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರು ಮಾಡಿರುವ ಭ್ರಷ್ಟಾಚಾರದ ಆರೋಪದ ಬಗ್ಗೆ 15 ದಿನಗಳಲ್ಲಿ ಪ್ರಾಥಮಿಕ ತನಿಖೆ ಆರಂಭಿಸುವಂತೆ ಬಾಂಬೆ ಹೈಕೋರ್ಟ್ ಇಂದು ಸಿಬಿಐಗೆ ನಿರ್ದೇಶನ ನೀಡಿದೆ.

ಡಾ.ಜೈಶ್ರೀ ಪಾಟೀಲ್ ಅವರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಅನಿಲ್ ದೇಶ್​ಮುಖ್ ಅವರು ಗೃಹ ಸಚಿವರಾಗಿದ್ದು, ಪೊಲೀಸರು ಯಾವುದೇ ನಿಷ್ಪಕ್ಷಪಾತ ತನಿಖೆ ನಡೆಸಲು ಸಾಧ್ಯವಿಲ್ಲ ಎಂದು ಹೇಳಿದರು.

ನ್ಯಾಯಾಲಯದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅರ್ಜಿದಾರ ಡಾ.ಜೈಶ್ರಿ ಪಾಟೀಲ್, "ಸಿಬಿಐ ನಿರ್ದೇಶಕರಿಗೆ 15 ದಿನಗಳಲ್ಲಿ ಪ್ರಾಥಮಿಕ ವಿಚಾರಣೆ ನಡೆಸಲು ಮತ್ತು ಯಾವುದೇ ಅಪರಾಧ ಕಂಡುಬಂದಲ್ಲಿ ಎಫ್ಐಆರ್ ದಾಖಲಿಸುವಂತೆ ಬಾಂಬೆ ಹೈಕೋರ್ಟ್ ಸೂಚಿಸಿದೆೆ" ಎಂದು ಹೇಳಿದರು.

ABOUT THE AUTHOR

...view details