ನವದೆಹಲಿ: ಸಿಬಿಎಸ್ಇ 10ನೇ ತರಗತಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಶೇ.94.40ರಷ್ಟು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಅಲ್ಲದೇ, ಈ ಪರೀಕ್ಷೆಯಲ್ಲೂ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ.
ಸಿಬಿಎಸ್ಇ 10ನೇ ತರಗತಿ ಫಲಿತಾಂಶ ಪ್ರಕಟ: ಶೇ.94.40ರಷ್ಟು ವಿದ್ಯಾರ್ಥಿಗಳು ಪಾಸ್ - Etv Bharat Kannada
ಕೇಂದ್ರ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್ಸಿ) 10ನೇ ತರಗತಿ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ cbseresults.nic.in ನಲ್ಲಿ ಪರಿಶೀಲಿಸಬಹುದು.
ಸಿಬಿಎಸ್ಇ 10ನೇ ತರಗತಿ ಫಲಿತಾಂಶ ಪ್ರಕಟ
ಬಾಲಕರಿಗಿಂತ ಶೇ.1.41ರಷ್ಟು ಬಾಲಕಿಯರ ಪಾಸ್ ಆಗಿದ್ದಾರೆ. ಶೇ.95.21ರಷ್ಟು ಬಾಲಕಿಯರು ಉತ್ತೀರ್ಣರಾಗಿದ್ದರೆ, ಶೇ.93.80ರಷ್ಟು ಹುಡುಗರು ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಇದೇ ವೇಳೆ ಶೇ.90ರಷ್ಟು ತೃತೀಯಲಿಂಗಿ ಅಭ್ಯರ್ಥಿಗಳು ಪಾಸ್ ಆಗಿದ್ದಾರೆ.
ಇದನ್ನೂ ಓದಿ:ಸಿಬಿಎಸ್ಸಿ 12 ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟ: ವಿದ್ಯಾರ್ಥಿನಿಯರದ್ದೇ ಮೇಲುಗೈ