ನವದೆಹಲಿ:ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ) 10ನೇ ತರಗತಿ ಪರೀಕ್ಷಾ ಫಲಿತಾಂಶ ಪ್ರಕಟಿಸಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು ಸಿಬಿಎಸ್ಇ ಅಧಿಕೃತ ವೆಬ್‌ಸೈಟ್‌ಗಳಾದ results.cbse.nic.in ಅಥವಾ cbseresults.nic.in ನಲ್ಲಿ ಪರಿಶೀಲಿಸಬಹುದು.
ಪ್ರಸ್ತುತ ವರ್ಷ ಶೇ 93.12 ಫಲಿತಾಂಶ ಪ್ರಕಟಗೊಂಡಿದ್ದು, ಇದು ಕಳೆದ ಬಾರಿಗಿಂತ ಶೇ 1.28 ರಷ್ಟು ಕಡಿಮೆಯಾಗಿದೆ. ಕಳೆದ ವರ್ಷ ಶೇ 94.40ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಈ ಬಾರಿ ಕೂಡ ಬಾಲಕರಿಗಿಂತ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
94.25ರಷ್ಟು ಬಾಲಕಿಯರು ಉತ್ತೀರ್ಣರಾದರೆ, ಬಾಲಕರ ಉತ್ತೀರ್ಣ ಪ್ರಮಾಣ ಶೇ 92.27 ರಷ್ಟಿದೆ. ಬೋರ್ಡ್ ಪರೀಕ್ಷೆಯಲ್ಲಿ ಐದು ಮುಖ್ಯ ವಿಷಯಗಳ ಪೈಕಿ ಒಂದನ್ನು ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಕಂಪಾರ್ಟ್‌ಮೆಂಟ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 1.34 ಲಕ್ಷ ವಿದ್ಯಾರ್ಥಿಗಳು ಸ್ಥಾನ ಪಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.