ನವದೆಹಲಿ: ಸಿಬಿಎಸ್ಇ ಶಾಲೆಗಳು 10 ನೇ ತರಗತಿಯ ವಿದ್ಯಾರ್ಥಿಗಳ ಅಂಕಪಟ್ಟಿ ತಯಾರಿಸಿ ಮಂಡಳಿಗೆ ಸಲ್ಲಿಸಲು ನೀಡಿದ್ದ ಗಡುವನ್ನು ಜೂನ್ 30 ರವರೆಗೆ ವಿಸ್ತರಿಸಲಾಗಿದೆ.
10ನೇ ತರಗತಿ ಅಂಕಪಟ್ಟಿ: ಸಿಬಿಎಸ್ಇ ಶಾಲೆಗಳಿಗೆ ನೀಡಿದ್ದ ಗಡುವು ಜೂನ್ 30 ರವರೆಗೆ ವಿಸ್ತರಣೆ
ಶಾಲೆಗಳು 10 ನೇ ತರಗತಿಯ ವಿದ್ಯಾರ್ಥಿಗಳ ಅಂಕಪಟ್ಟಿ ತಯಾರಿಸಿ ಮಂಡಳಿಗೆ ಸಲ್ಲಿಸಲು ನೀಡಿದ್ದ ಗಡುವನ್ನು ಸಿಬಿಎಸ್ಸಿ ಜೂನ್ 30 ರವರೆಗೆ ವಿಸ್ತರಿಸಿದೆ.
ಈ ಮೊದಲು ಸಿಬಿಎಸ್ಸಿ ಮೌಲ್ಯಾಂಕನದ ಎಲ್ಲಾ ಪ್ರಕ್ರಿಯೆಗಳು ಜೂನ್ 11 ರೊಳಗೆ ಪೂರ್ಣಗೊಳಿಸಿ ಜೂನ್ 20 ರಂದು ಪ್ರಕಟಿಸುವುದಾಗಿ ತಿಳಿಸಿತ್ತು. ಆದರೆ, ವಿವಿಧ ರಾಜ್ಯಗಳಲ್ಲಿ ಕೊರೊನಾ ಲಾಕ್ಡೌನ್ ಜಾರಿಯಲ್ಲಿರುವುದರಿಂದ ಶಿಕ್ಷಕರು ಮತ್ತು ಶಾಲಾ ಸಿಬ್ಬಂದಿಯ ಆರೋಗ್ಯದ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.
ಈ ಹಿಂದೆ ಕೇಂದ್ರ ಶಿಕ್ಷಣ ಸಚಿವಾಲಯವು ಸಿಬಿಎಸ್ಇ 10 ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಿ 12 ನೇ ತರಗತಿ ಪರೀಕ್ಷೆಗಳನ್ನು ಮುಂದೂಡಿದ್ದರಿಂದ ಕೋವಿಡ್ ಪ್ರಕರಣಗಳು ಹೆಚ್ಚಾಗಿದ್ದವು. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.