ಜಬಲ್ಪುರ್ (ಮಧ್ಯಪ್ರದೇಶ):ನಿಯಂತ್ರಣ ಕಳೆದುಕೊಂಡ ಟ್ರಕ್ವೊಂದು ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಪಲ್ಟಿಯಾಗಿದ್ದು, ಇದರ ರಭಸಕ್ಕೆ ಡ್ರೈವರ್ಅದರೊಳಗಿನಿಂದ ಹೊರಗೆ ಹಾರಿಬಿದ್ದಿದ್ದಾನೆ.
ಘಟನೆಯ ಸಂಪೂರ್ಣ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿವೆ. ಮಧ್ಯಪ್ರದೇಶದ ಜಬಲ್ಪುರ್ ಠಾಣಾ ಕ್ಷೇತ್ರದಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದೆ. ವೇಗವಾಗಿ ಬರುತ್ತಿದ್ದ ಟ್ರಕ್ ಏಕಾಏಕಿ ನಿಯಂತ್ರಣ ಕಳೆದುಕೊಂಡಿರುವ ಕಾರಣ ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.