ನವದೆಹಲಿ:ಜೆಕ್ ಗಣರಾಜ್ಯಕ್ಕೆ ಭೇಟಿ ನೀಡಿರುವ ಸೇನಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಅವರು ಅಲ್ಲಿನ ಸೇನಾ ಸಿಬ್ಬಂದಿ ಮುಖ್ಯಸ್ಥರನ್ನು ಭೇಟಿಯಾಗಿ ಉಭಯ ದೇಶಗಳ ಸೇನಾ ಸಹಕಾರ ವಿಚಾರವಾಗಿ ಕೆಲವೊಂದು ವಿಚಾರಗಳನ್ನು ಹಂಚಿಕೊಂಡಿದ್ದಾರೆ.
ಈ ಕುರಿತು ಟ್ವಿಟರ್ನಲ್ಲಿ ಮಾಹಿತಿ ನೀಡಿರುವ ಭಾರತೀಯ ಸೇನೆಯ ಸಾರ್ವಜನಿಕ ಮಾಹಿತಿ ವಿಭಾಗದ ಎಡಿಜಿ, ಬಿಪಿನ್ ರಾವತ್ ಅವರು ಜೆಕ್ ರಿಪಬ್ಲಿಕ್ಗೆ ಭೇಟಿ ನೀಡಿದ್ದು, ಅಲ್ಲಿನ ಸೇನೆಯಿಂದ ಗೌರವವನ್ನು ಸ್ವೀಕರಿಸಿದ್ದಾರೆ. ಜೊತೆಗೆ ಪ್ರೇಗ್ನಲ್ಲಿ ವಿಟ್ಕೋವ್ ರಾಷ್ಟ್ರೀಯ ಸ್ಮಾರಕಕ್ಕೆ ಗೌರವ ಸಲ್ಲಿಸಿದ್ದಾರೆ ಎಂದಿದೆ.
ಇದರ ಜೊತೆಗೆ ಬಿಪಿನ್ ರಾವತ್, ಸೇನಾ ಸಿಬ್ಬಂದಿ ಮುಖ್ಯಸ್ಥ ಅಲೆಸ್ ಒಪಾಟಾ ಅವರೊಂದಿಗೆ ಸಭೆ ನಡೆಸಿದ್ದು, ಉಭಯ ದೇಶಗಳ ನಡುವಿನ ರಕ್ಷಣಾ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಮತ್ತೊಂದು ಟ್ವೀಟ್ನಲ್ಲಿ ತಿಳಿಸಲಾಗಿದೆ.
ಇದರೊಂದಿಗೆ ರಾವತ್ ಅವರು ಜೆಕ್ ಗಣರಾಜ್ಯದ ವಿದೇಶಾಂಗ ಸಚಿವ ಜಾಕುಬ್ ಕುಲ್ಹಾನೆಕ್ ಅವರೊಂದಿಗೆ ಸಂವಾದ ನಡೆಸಿದ್ದಾರೆ. ದ್ವಿಪಕ್ಷೀಯ ರಕ್ಷಣಾ ಸಹಕಾರವನ್ನು ಬಲಪಡಿಸುವ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಾಗಿದೆ ಎಂದು ಸೇನೆ ತಿಳಿಸಿದೆ.
ಇದನ್ನೂ ಓದಿ:ರಾಜ್ಯಸಭೆಯ ಮಾಜಿ MP ಬದುಕಿದ್ದಾನೆಂದು ಬಿಂಬಿಸಿ ಸುಮಾರು ಒಂದು ಕೋಟಿ ರೂಪಾಯಿ ವಂಚಿಸಲು ಯತ್ನ!