ನವದೆಹಲಿ: 18 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಮೂಗಿನ ಮೂಲಕ ನೀಡುವ ಕೋವಿಡ್ ಲಸಿಕೆಗೆ ಈ ವರ್ಷದ ಸೆಪ್ಟೆಂಬರ್ 5 ರಂದು ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (ಸಿಡಿಎಸ್‌ಸಿಒ) ಅನುಮೋದನೆ ನೀಡಿದೆ ಎಂದು ಆರೋಗ್ಯ ಖಾತೆ ರಾಜ್ಯ ಸಚಿವೆ ಭಾರತಿ ಪ್ರವೀಣ್ ಪವಾರ್ ಮಂಗಳವಾರ ರಾಜ್ಯಸಭೆಗೆ ಮಾಹಿತಿ ನೀಡಿದ್ದಾರೆ.
ಸಂಸದರೊಬ್ಬರ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಕೇಂದ್ರ ಸಚಿವೆ ಪವಾರ್, ಲಸಿಕೆಯನ್ನು 28 ದಿನಗಳ ಅಂತರದಲ್ಲಿ ತಲಾ 0.5 ಮಿಲಿ ಎರಡು ಡೋಸ್‌ಗಳಲ್ಲಿ ನೀಡಲಾಗುವುದು ಎಂದು ಹೇಳಿದ್ದಾರೆ.ವಿದೇಶಗಳೊಂದಿಗೆ ಮಾಡಿಕೊಂಡಿರುವ ಪರಸ್ಪರ ವಿನಿಮಿಯ ನೀತಿ ಅನ್ವಯ ಭಾರತವು 90 ಕ್ಕೂ ಹೆಚ್ಚು ದೇಶಗಳಿಗೆ ಕೋವಿಡ್-19 ಲಸಿಕೆಯನ್ನು ರಫ್ತು ಮಾಡಲಾಗಿದೆ ಎಂದು ಕೇಂದ್ರ ಸಚಿವೆ ಭಾರತಿ ಪ್ರವೀಣ್ ಪವಾರ್ ತಿಳಿಸಿದ್ದಾರೆ.
ಭಾರತ್ ಬಯೋಟೆಕ್‌ನ ಇಂಟ್ರಾನಾಸಲ್ ಕೋವಿಡ್ ಲಸಿಕೆಯನ್ನು ಕೇಂದ್ರ ಆರೋಗ್ಯ ಸಚಿವಾಲಯವು 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ಆಗಿ ಲಸಿಕೆ ಕಾರ್ಯಕ್ರಮದಲ್ಲಿ ಸೇರಿಸಲು ಅನುಮೋದಿಸಿದೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ.