ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ನೌಕರರ ತುಟ್ಟಿಭತ್ಯೆ (ಡಿಎ)ಯನ್ನು ಶೇ.4ರಷ್ಟು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಇದರಿಂದ 50 ಲಕ್ಷಕ್ಕೂ ಹೆಚ್ಚು ಕೇಂದ್ರ ಸರ್ಕಾರಿ ನೌಕರರು ಮತ್ತು 62 ಲಕ್ಷ ಪಿಂಚಣಿದಾರರು ಇದರ ಲಾಭ ಪಡೆಯಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ (ಸಿಸಿಇಎ) ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದೆ. ಇಂದಿನ ಶೇ.4ರಷ್ಟು ಡಿಎ ಹೆಚ್ಚಳದಿಂದ ಸರ್ಕಾರಿ ನೌಕರರಿಗೆ ನೀಡಲಾಗುವ ಒಟ್ಟು ಡಿಎ ಶೇ.34ರಿಂದ ಶೇ.38ಕ್ಕೆ ಏರಿಕೆಗೊಂಡಂತೆ ಆಗಿದೆ. ಡಿಎ ಮೂಲ ವೇತನದ ಮೇಲೆ ನಿರ್ಧರಿಸಲಾಗುತ್ತದೆ ಮತ್ತು ಇದನ್ನು ಮೂಲ ವೇತನಕ್ಕೆ ಸೇರಿಸಲಾಗುತ್ತದೆ.