ಬೆಂಗಳೂರು :ರಾಜ್ಯ ಹೈಕೋರ್ಟ್ನ ಹೆಚ್ಚುವರಿ ನ್ಯಾಯಮೂರ್ತಿಗಳಾದ ಎಸ್ ಆರ್ ಕೃಷ್ಣಕುಮಾರ್, ನ್ಯಾಯಮೂರ್ತಿ ಅಶೋಕ್ ಕಿಣಗಿ, ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್, ನ್ಯಾಯಮೂರ್ತಿ ಸಚಿನ್ ಶಂಕರ ಮೊಗದಂ ಅವರನ್ನು ಖಾಯಂಗೊಳಿಸಿ ಕೇಂದ್ರ ಸರ್ಕಾರ ಆದೇಶಿಸಿದೆ.
ಈ ಸಂಬಂಧ ಕೇಂದ್ರ ಕಾನೂನು ಸಚಿವಾಲಯ ಅಧಿಸೂಚನೆ ಹೊರಡಿಸಿದ್ದು, ರಾಷ್ಟ್ರಪತಿಗಳ ಆದೇಶಾನುಸಾರ ನಾಲ್ವರು ನ್ಯಾಯಮೂರ್ತಿಗಳನ್ನು ಖಾಯಂಗೊಳಿಸಲಾಗುತ್ತಿದೆ ಎಂದು ತಿಳಿಸಿದೆ.