ನವದೆಹಲಿ:ಕೃಷಿ ಕಾನೂನುಗಳ ವಿರುದ್ಧ ರೈತರು ನ್ಯಾಯ ಸಮ್ಮತ ಬೇಡಿಕೆ ಇಟ್ಟುಕೊಂಡು ಹೋರಾಟ ನಡೆಸುತ್ತಿದ್ದರೂ, ಕೇಂದ್ರ ಸರ್ಕಾರ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ದೆಹಲಿ ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಈಗಾಗಲೇ ಕೆಲ ರೈತರು ಸಾವನ್ನಪ್ಪಿದ್ದಾರೆ. ಇಷ್ಟಾದರೂ ಕೇಂದ್ರ ಸರ್ಕಾರ ರೈತರ ಬಗ್ಗೆ ಸಂವೇದನೆ ತೋರುತ್ತಿಲ್ಲ. ಚಳಿಗಾಲದ ಸಮಯದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವುದು ನಿಜಕ್ಕೂ ಆಘಾತಕಾರಿ. ವಿವಿಧ ಮಾಧ್ಯಮಗಳಲ್ಲಿ ವರದಿಯಾಗಿರುವ ಮಾಹಿತಿ ಪ್ರಕಾರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಸುಮಾರು 57 ರೈತರು ಅನಾರೋಗ್ಯಕ್ಕೊಳಗಾಗಿ ಸಾವನ್ನಪ್ಪಿದ್ದಾರೆ.