ನವದೆಹಲಿ:ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಶಕ್ತಿಕಾಂತ ದಾಸ್ ಅವರ ಅಧಿಕಾರಾವಧಿಯನ್ನು ಕೇಂದ್ರ ಸರ್ಕಾರವು ಮೂರು ವರ್ಷಗಳ ಅವಧಿಗೆ ವಿಸ್ತರಿಸಿ ಶುಕ್ರವಾರ ಆದೇಶ ಹೊರಡಿಸಿದೆ.
10.12.2021ರ ನಂತರ ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ, ಯಾವುದು ಮೊದಲೋ ಅಲ್ಲಿಯವರೆಗೆ ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಆಗಿ ಶಕ್ತಿಕಾಂತ ದಾಸ್ ಅವರನ್ನು ಮರುನೇಮಕ ಮಾಡಲು ಸಂಪುಟ ನೇಮಕಾತಿ ಸಮಿತಿಯು ಅನುಮೋದಿಸಿದೆ ಎಂದು ಅಧಿಕೃತ ಪ್ರಕಟಣೆ ಹೊರಡಿಸಿದೆ.