ನವದೆಹಲಿ: ದೇಶದಲ್ಲಿ ಕೋವಿಡ್ ಮೂರನೇ ಅಲೆ ಜೋರಾಗಿದ್ದು, ಪ್ರತಿದಿನ ಲಕ್ಷಾಂತರ ಸಂಖ್ಯೆಯಲ್ಲಿ ಹೊಸ ಸೋಂಕಿತ ಪ್ರಕರಣಗಳು ದಾಖಲಾಗುತ್ತಿವೆ. ಇದನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷೆಯ ಕಾರ್ಯವಿಧಾನ ಹೆಚ್ಚಿಸುವಂತೆ ಕೇಂದ್ರ ಸರ್ಕಾರ, ರಾಜ್ಯಗಳು ಹಾಗು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದೆ.
ಕೆಲವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೋವಿಡ್ ಪರೀಕ್ಷೆ ನಡೆಸುವ ಕಾರ್ಯದಲ್ಲಿ ಗಣನೀಯ ಕುಸಿತವಾಗಿದೆ. ಇದರಿಂದಾಗಿ ಹೆಚ್ಚಿನ ಜನರಿಗೆ ಸೋಂಕು ಹರಡುತ್ತಿದೆ. ಇಂತಹ ಪ್ರದೇಶಗಳ ಮೇಲೆ ತಕ್ಷಣವೇ ಗಮನಹರಿಸಿ, ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಆರೋಗ್ಯ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಆರ್ತಿ ಆಹುಜಾ ಸೂಚನೆ ನೀಡಿದ್ದಾರೆ.