ನವದೆಹಲಿ: ದೇಶದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಹಾಗೂ ಆರೋಗ್ಯ ಕಾರ್ಯಕರ್ತರಿಗೆ ಹೆಚ್ಚುವರಿ ಡೋಸ್ (ಬೂಸ್ಟರ್ ಡೋಸ್) ನೀಡಲು ಕೇಂದ್ರ ಸರ್ಕಾರ ಕೈಗೊಂಡ ಕ್ರಮ ಸ್ವಾಗತಾರ್ಹ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಬೂಸ್ಟರ್ ಡೋಸ್ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಈ ಹಿಂದೆ ಮನವಿ ಮಾಡಿದ್ದೆ. ನನ್ನ ಸಲಹೆಯನ್ನು ಸರ್ಕಾರ ಒಪ್ಪಿಕೊಂಡಿದೆ. ಇದು ಸರಿಯಾದ ಹೆಜ್ಜೆ, ದೇಶದ ಜನರ ಸುರಕ್ಷತೆ ಸರ್ಕಾರದ ಹೊಣೆ ಎಂದಿದ್ದಾರೆ.