ನವದೆಹಲಿ:ಜನವರಿ 3 ರಿಂದ 15- 18 ವರ್ಷದೊಳಗಿನ ಮಕ್ಕಳಿಗೆ ಮೊದಲ ಡೋಸ್, ಆರೋಗ್ಯ ಕಾರ್ಯಕರ್ತರು ಮತ್ತು 60 ವರ್ಷ ಮೇಲ್ಪಟ್ಟ ನಾಗರಿಕರಿಗೆ ಬೂಸ್ಟರ್ ಡೋಸ್ ಲಸಿಕೆ ನೀಡಲಾಗುತ್ತಿದೆ. ಇದರಲ್ಲಿ 7.40 ಕೋಟಿ 15-18 ವರ್ಷದ ಮಕ್ಕಳು ಮತ್ತು 60 ವರ್ಷ ಅಥವಾ ಮೇಲ್ಪಟ್ಟ ವಯಸ್ಸಿನ 2.75 ಕೋಟಿ ಫಲಾನುಭವಿಗಳನ್ನು ಕೇಂದ್ರ ಸರ್ಕಾರ ಗುರುತಿಸಿದೆ.
ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಕಾರ್ಯದರ್ಶಿಗಳೊಂದಿಗೆ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಮಂಗಳವಾರ ಸಭೆ ನಡೆಸಿದರು. ಅಲ್ಲದೇ, ಕೋವಿಡ್ ಪ್ರಸರಣ, ಕೋವಿಡ್ ರೂಪಾಂತರಿ ಒಮಿಕ್ರಾನ್ ಪತ್ತೆಯಿಂದಾಗಿ ದೇಶದಲ್ಲಿ ಲಸಿಕಾಕರಣದ ವೇಗವನ್ನು ಇನ್ನಷ್ಟು ಹೆಚ್ಚಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.
COVAXIN vaccine for children age between 15-18: ಚುನಾವಣಾ ರಾಜ್ಯಗಳಲ್ಲಿ ನಿಯೋಜನೆಯಾಗುವ ಭದ್ರತಾ ಸಿಬ್ಬಂದಿಯನ್ನು ಮುಂಚೂಣಿ ಕಾರ್ಯಕರ್ತರನ್ನಾಗಿ ಪರಿಗಣಿಸಬೇಕು. ಅಲ್ಲದೇ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು 15-18 ವರ್ಷ ವಯಸ್ಸಿನ ಮಕ್ಕಳಿಗೆ ಕೋವಾಕ್ಸಿನ್ ಲಸಿಕೆಯನ್ನು ಮಾತ್ರ ನೀಡಬೇಕು ಎಂದು ಸೂಚಿಸಿದ್ದಾರೆ.