ನವದೆಹಲಿ:ದೇಶಾದ್ಯಂತ ಸೋಂಕಿತರ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹೊಸ ನಿರ್ಧಾರ ತೆಗೆದುಕೊಂಡಿದ್ದು, 45 ವರ್ಷ ಹಾಗೂ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನ ಕೇಂದ್ರ ಸರ್ಕಾರದ ನೌಕರರು ತಾವೇ ಲಸಿಕೆ ಹಾಕಿಸಿಕೊಳ್ಳುವಂತೆ ಸೂಚಿಸಿದೆ.
ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಕೇಂದ್ರ ಸರ್ಕಾರದ ಎಲ್ಲ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ಆದೇಶ ಹೊರಡಿಸಿದ್ದು, ಸಿಬ್ಬಂದಿ ತಾವಾಗಿಯೇ ಕೊರೊನಾ ಲಸಿಕೆ ಪಡೆಯಬೇಕು ಎಂದು ಆದೇಶ ಪ್ರತಿಯಲ್ಲಿ ಉಲ್ಲೇಖಿಸಿದೆ.
ಕೊರೊನಾ ವ್ಯಾಕ್ಸಿನ್ ಪಡೆದುಕೊಂಡ ನಂತರವೂ ಜಾಗ್ರತೆ ಇಂದಿರಬೇಕೆಂದು ಸೂಚನೆ ನೀಡಲಾಗಿದ್ದು, ಸ್ಯಾನಿಟೈಸೇಷನ್, ಮಾಸ್ಕ್ ಧರಿಸುವುದು ಸೇರಿದಂತೆ ಕೋವಿಡ್ ಮಾರ್ಗಸೂಚಿಗಳ ಪಾಲನೆ ಮಾಡಬೇಕೆಂದು ಉದ್ಯೋಗಿಗಳಿಗೆ ನಿರ್ದೇಶನ ನೀಡಿದೆ.