ನವದೆಹಲಿ:ಎರಡನೇ ಅಲೆ ಕೋವಿಡ್ ಸೋಂಕಿನಿಂದ ದೇಶಾದ್ಯಂತ ಸಾವಿರಾರು ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದು, ಇದರಿಂದ ಅನೇಕ ಮಕ್ಕಳು ಅನಾಥರಾಗಿದ್ದಾರೆ. ಇದರ ಜವಾಬ್ದಾರಿ ಹೊತ್ತುಕೊಂಡಿರುವ ಕೇಂದ್ರ ಸರ್ಕಾರ ಈಗಾಗಲೇ ಪ್ರತಿ ತಿಂಗಳು 2 ಸಾವಿರ ರೂಪಾಯಿ ಸಹಾಯಧನ ನೀಡುತ್ತಿದ್ದು, ಇದೀಗ ಅದರಲ್ಲಿ ಮತ್ತಷ್ಟು ಏರಿಕೆ ಮಾಡಲು ಚಿಂತನೆ ನಡೆಸಿದೆ ಎಂಬ ಮಾತು ಕೇಳಿ ಬರುತ್ತಿದೆ.
PM Cares for children ನಿಧಿಯಿಂದ ಈಗಾಗಲೇ ಅನಾಥ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದ್ದು, 23 ವರ್ಷ ತುಂಬಿದ ನಂತರ ಅವರ ಖಾತೆಯಲ್ಲಿ 10 ಲಕ್ಷ ರೂ. ಇಡಲು ನಿರ್ಧರಿಸಿದೆ. ಈಗಾಗಲೇ ಅವರಿಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡಲಾಗುತ್ತಿದ್ದು, ಶೀಘ್ರದಲ್ಲೇ ಅದನ್ನ 4 ಸಾವಿರ ರೂ.ಗೆ ಏರಿಕೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.