ನವದೆಹಲಿ:ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಕ್ಲೀನ್ ಚಿಟ್ ಪಡೆದ ಬೆನ್ನಲ್ಲೇ ಎನ್ಸಿಬಿ ಮಾಜಿ ಅಧಿಕಾರಿ ಸಮೀರ್ ವಾಂಖೆಡೆಗೆ ಸಂಕಷ್ಟ ಎದುರಾಗಿದೆ. ಕಳಪೆ ತನಿಖೆಗೆ ಸಮೀರ್ ವಾಂಖೆಡೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರ ಸೂಚಿಸಿದೆ.
ಕಳೆದ ವರ್ಷದ ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಖಾನ್ಗೆ ಶುಕ್ರವಾರ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ) ಕ್ಲೀನ್ ಚಿಟ್ ನೀಡಿದೆ. ಇದಾಗ ಕೆಲವೇ ಗಂಟೆಗಳಲ್ಲಿ ಈ ಪ್ರಕರಣದ ತನಿಖಾಧಿಕಾರಿಯಾಗಿದ್ದ ಸಮೀರ್ ವಾಂಖೆಡೆ ವಿರುದ್ಧ ಕ್ರಮ ಜರುಗಿಸುವಂತೆ ಸರ್ಕಾರ ಆದೇಶಿಸಿದೆ. ಈಗಾಗಲೇ ನಕಲಿ ಜಾತಿಪ್ರಮಾಣ ಪತ್ರ ನೀಡಿದ ಆರೋಪವನ್ನೂ ವಾಂಖೆಡೆ ಎದುರಿಸುತ್ತಿದ್ದು, ಈ ಸಂಬಂಧ ಕೂಡ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.