ನವದೆಹಲಿ:ಕಳೆದ 7 ವರ್ಷಗಳಲ್ಲಿ ಎನ್‌ಡಿಎ ಸರ್ಕಾರ ವಿವಿಧ ಇಲಾಖೆಗಳಿಗೆ ಸುಮಾರು 6.98 ಲಕ್ಷ ಉದ್ಯೋಗಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗಿದೆ ಎಂದು ಸಿಬ್ಬಂದಿ, ಸಾರ್ವಜನಿಕ ಕುಂದು ಕೊರತೆಗಳು ಮತ್ತು ಪಿಂಚಣಿ ಖಾತೆ ರಾಜ್ಯ ಸಚಿವ ಜೀತೇಂದ್ರ ಸಿಂಗ್ ರಾಜ್ಯಸಭೆಯಲ್ಲಿ ಹೇಳಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಪೂರಕ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ನೇಮಕಾತಿ ಪ್ರಕ್ರಿಯೆ ತ್ವರಿತಗೊಳಿಸಿದೆ. ಮಾತ್ರವಲ್ಲದೇ ಅದೆ ಸಮಯದಲ್ಲಿ ಹೊಸ ಹುದ್ದೆಗಳನ್ನು ರಚಿಸುವ ಪ್ರಯತ್ನಗಳನ್ನು ಮಾಡಿದೆ ಎಂದು ವಿವರಿಸಿದರು.
2007-08 ರಿಂದ 2013-14 ರ ನಡುವೆ 6,19,027 ಹುದ್ದೆಗಳನ್ನು ಮೂರು ಪ್ರಮುಖ ನೇಮಕಾತಿ ಏಜೆನ್ಸಿಗಳಾದ ಸ್ಟಾಫ್ ಸೆಲೆಕ್ಷನ್ ಕಮಿಷನ್, ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ಹಾಗೂ ರೈಲ್ವೆ ನೇಮಕಾತಿ ಮಂಡಳಿಯಿಂದ ಭರ್ತಿ ಮಾಡಲಾಗಿದೆ. 2014ರಲ್ಲಿ 36,45,584 ರಷ್ಟು ಇದ್ದ ಮಂಜೂರಾತಿಯನ್ನು 2020ರಲ್ಲಿ 40,04,941ಕ್ಕೆ ಏರಿಕೆ ಮಾಡಲಾಗಿದೆ ಎಂದು ಸಚಿವರು ಹೇಳಿದರು.