ನವದೆಹಲಿ:ಕೋವಿಡ್ ರೂಪಾಂತರ ತಳಿಯಾದ ಒಮಿಕ್ರೋನ್ ಆತಂಕ ಎಲ್ಲೆಡೆ ಆರಂಭವಾಗಿದೆ. ಭಾರತದಲ್ಲಿ ಹೊಸ ಕೋವಿಡ್ ತಳಿ ಪತ್ತೆಯಾಗಿಲ್ಲವಾದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ.
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಕೋವಿಡ್ ಪರೀಕ್ಷೆ ಮತ್ತು ಒಮಿಕ್ರೋನ್ ತಡೆಯಲು ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆಯಲು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಸ್ಥರ ಸಭೆ ಕರೆದಿದ್ದಾರೆ.