ಕರ್ನಾಟಕ

karnataka

ETV Bharat / bharat

ದೇಶದಲ್ಲಿ ಕೋವಿಡ್‌ ಉಲ್ಬಣ: ಮಾರ್ಗಸೂಚಿ ಪಾಲಿಸುವಂತೆ ಕೇಂದ್ರ ಸರ್ಕಾರ ಮನವಿ

ದೇಶಾದ್ಯಂತ ಕೋವಿಡ್​ ಅಬ್ಬರಿಸುತ್ತಿದೆ. ಹೀಗಾಗಿ, ಸ್ವಾತಂತ್ರ್ಯೋತ್ಸವ ಸಂಭ್ರಮದಲ್ಲಿ ದೊಡ್ಡ ದೊಡ್ಡ ಮಟ್ಟದ ಸಭೆ ನಡೆಸದಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.

Covid cases rise
Covid cases rise

By

Published : Aug 12, 2022, 4:11 PM IST

ನವದೆಹಲಿ:ಕಳೆದ ಕೆಲ ದಿನಗಳಿಂದ ದೇಶದಲ್ಲಿ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ಕರ್ನಾಟಕ, ದೆಹಲಿ, ಮಹಾರಾಷ್ಟ್ರ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಪಾಸಿಟಿವಿಟಿ ಪ್ರಮಾಣ ಶೇ.15 ರ ಗಡಿ ದಾಟಿದೆ. ಹೀಗಾಗಿ, ಕೇಂದ್ರ ಸರ್ಕಾರ ಮುಂಜಾಗ್ರತಾ ಕ್ರಮ ಕೈಗೊಂಡಿದೆ.

ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಎಚ್ಚರಿಕೆ ರವಾನಿಸಿದ್ದು, ಸ್ವಾತಂತ್ರ್ಯೋತ್ಸವ ಸಂಭ್ರಮದಲ್ಲಿ ಜನರು ದೊಡ್ಡ ಪ್ರಮಾಣದಲ್ಲಿ ಸೇರುವಂತಿಲ್ಲ. ಕೋವಿಡ್ ಪ್ರೋಟೋಕಾಲ್​ ಅನುಸರಣೆ ಮಾಡುವಂತೆ ತಿಳಿಸಿದೆ.

ಪ್ರಮುಖ ಮಾರ್ಗಸೂಚಿಗಳು ಇಂತಿವೆ:

  • ಸಮಾರಂಭದಲ್ಲಿ ದೊಡ್ಡ ಪ್ರಮಾಣದಲ್ಲಿ ಯಾರೂ ಸೇರುವಂತಿಲ್ಲ.
  • ಕೇಂದ್ರ ಮತ್ತು ರಾಜ್ಯಗಳು ಮಾಡಿರುವ ಕೋವಿಡ್ ಮಾರ್ಗಸೂಚಿ ಅನುಸರಣೆ ಕಡ್ಡಾಯ.
  • ಮಾಸ್ಕ್​ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು.

ದೆಹಲಿಯಲ್ಲಿ ಕೋವಿಡ್ ಪ್ರಕರಣಗಳಲ್ಲಿ ದಿಢೀರ್ ಏರಿಕೆಯಾಗಿದ್ದು ಈಗಾಗಲೇ ಮಾಸ್ಕ್ ಧಾರಣೆ ಕಡ್ಡಾಯವಾಗಿದೆ. ಆದೇಶ ಉಲ್ಲಂಘಿಸಿದರೆ ತಲಾ 500 ರೂ ದಂಡ ವಿಧಿಸಲು ಸರ್ಕಾರ ಮುಂದಾಗಿದೆ. ದೇಶಾದ್ಯಂತ ನಿನ್ನೆ 16,561 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಸದ್ಯದ ಪಾಸಿಟಿವಿಟಿ ದರ ಶೇ. 5.44 ರಷ್ಟಿದೆ.

ಇದನ್ನೂ ಓದಿ:ಕೊರೊನಾ ಹೆಚ್ಚಳ: ದೆಹಲಿಯಲ್ಲಿ ಮಾಸ್ಕ್​ ಕಡ್ಡಾಯ

ABOUT THE AUTHOR

...view details