ಮುಂಬೈ (ಮಹಾರಾಷ್ಟ್ರ): ನಟಿ ಅನುಷ್ಕಾ ಶರ್ಮಾ ಅವರು ಭಾರತದ ಮಹಿಳಾ ವೇಗದ ಬೌಲರ್ ಜೂಲನ್ ಗೋಸ್ವಾಮಿ ಅವರ ಬಯೋಪಿಕ್ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರಕ್ಕೆ 'ಚಕ್ಡಾ ಎಕ್ಸ್‌ಪ್ರೆಸ್' ಎಂದು ಹೆಸರಿಡಲಾಗಿದೆ.
ನೀವು ಅನುಷ್ಕಾ ಅವರ ಸಾಮಾಜಿಕ ಜಾಲತಾಣವನ್ನು ಗಮನಿಸುವುದಾದರೆ, ಅವರು ನಿರಂತರವಾಗಿ ವರ್ಕ್‌ಔಟ್‌ಗೆ ಸಂಬಂಧಿಸಿದ ವಿಷಯವನ್ನು ಪೋಸ್ಟ್ ಮಾಡುತ್ತಿರುತ್ತಾರೆ. ಅದೇ ರೀತಿ ಇದೀಗ ಅವರು ಜೂಲನ್ ಅವರ ಜೀವನಾಧರಿತ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬುದನ್ನು ಪೋಸ್ಟ್ ಮಾಡಿದ್ದಾರೆ.
ಅನುಷ್ಕಾ ಭಾರತೀಯ ಚಿತ್ರರಂಗದ ಫಿಟ್ಟೆಸ್ಟ್ ನಟಿಯರಲ್ಲಿ ಒಬ್ಬರಾಗಿರುವಾಗ, ಜೂಲನ್ ಪಾತ್ರವನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಅಗತ್ಯವಿರುವ ರೀತಿಯ ದೇಹ ಮತ್ತು ಫಿಟ್‌ನೆಸ್ ಮಟ್ಟವನ್ನು ಸಾಧಿಸಲಿದ್ದಾರೆ.