ಅಮರಾವತಿ :ಟಿಡಿಪಿ ಅಧಿಕಾರಿಗಳು ಮತ್ತು ನಾಯಕರ ನಿವಾಸಗಳ ಮೇಲೆ ನಡೆದ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ಆ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು 36 ಗಂಟೆಗಳ ಪ್ರತಿಭಟನೆ ಘೋಷಿಸಿದ್ದಾರೆ. ನಾಯ್ಡು ಗುರುವಾರ ಬೆಳಗ್ಗೆ 8 ಗಂಟೆಗೆ ಪ್ರತಿಭಟನೆಯನ್ನು ಆರಂಭಿಸಲಿದ್ದು, ಶುಕ್ರವಾರ ರಾತ್ರಿ 8 ಗಂಟೆಗೆ ಕೊನೆಗೊಳ್ಳಲಿದೆ.
ತಮ್ಮ ಪಕ್ಷದ ಕಚೇರಿ, ನಾಯಕರ ಮೇಲಿನ ದಾಳಿಯನ್ನು 'ರಾಜ್ಯ ಪ್ರಾಯೋಜಿತ ಭಯೋತ್ಪಾದನೆ' ಎಂದು ಕರೆದಿರುವ ನಾಯ್ಡು, ಸರ್ಕಾರವು ಗುಂಪುಗಾರಿಕೆಗೆ ಉತ್ತೇಜನ ನೀಡುತ್ತಿದೆ ಎಂದು ಟೀಕಿಸಿದ್ದಾರೆ. ಇದರಲ್ಲಿ ಪೊಲೀಸರು ಕೂಡ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ.
ರಾಜ್ಯದಲ್ಲಿ ಪ್ರಜಾಪ್ರಭುತ್ವ ಹಾಳಾಗಿದೆ ಎಂದು ಟೀಕಿಸಿರುವ ಅವರು, ಮುಖ್ಯಮಂತ್ರಿ ಜಗನ್ ಮತ್ತು ಡಿಜಿಪಿ ಅವರು ವಿರೋಧ ಪಕ್ಷದ ನಾಯಕರ ಮೇಲೆ ದೈಹಿಕ ದಾಳಿ ಮತ್ತು ವಿಧ್ವಂಸಕ ಕೃತ್ಯಗಳನ್ನು ಎಸಗುತ್ತಿದ್ದಾರೆ ಎಂದಿದ್ದಾರೆ.