ರೇವಾ(ಮಧ್ಯಪ್ರದೇಶ): ಏಷ್ಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ದಾಖಲೆಯೊಂದನ್ನು ಸೃಷ್ಟಿಸಿರುವ ಚೆಫ್ ಲತಾ ಟಂಡನ್ ತಮ್ಮ ಪತಿ ಮೋಹಿತ್ ಟಂಡನ್ ವಿರುದ್ಧ ಮಧ್ಯಪ್ರದೇಶದ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮೋಹಿತ್ ಟಂಡನ್ ಬೇರೆ ಮಹಿಳೆಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದು, ವಿಚ್ಛೇದನ ನೀಡುವಂತೆ ಒತ್ತಡ ಹೇರುತ್ತಿದ್ದಾರೆ. ಇದರ ಜೊತೆಗೆ ಕಿರುಕುಳ ನೀಡುತ್ತಿದ್ದು, ಪೊಲೀಸರು ಕ್ರಮ ಕೈಗೊಳ್ಳಬೇಕೆಂದು ಲತಾ ಟಂಡನ್ ಒತ್ತಾಯಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಲತಾ ಟಂಡನ್ ಅವರು ಪತಿ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಅಶ್ಲೀಲ ಪದಗಳನ್ನು ಬಳಸಿ ನಿಂದಿಸಿ ನನ್ನನ್ನು ಮನೆಯಿಂದ ಹೊರಹಾಕಲಾಗಿದೆ. ವಿವಾಹಿತ ಮಹಿಳೆಯೊಂದಿಗೆ ಮೋಹಿತ್ ನಾಲ್ಕು ತಿಂಗಳಿನಿಂದ ಅಕ್ರಮ ಸಂಬಂಧ ಹೊಂದಿದ್ದಾರೆ. ಈ ವಿಷಯ ತಿಳಿದಾಗ ಮನೆಯವರು ಮೋಹಿತ್‌ಗೆ ಮನವರಿಕೆ ಮಾಡಿಕೊಡಲು ಯತ್ನಿಸಿದ್ದಾರೆ. ಆದರೂ, ಆತ ಯಾರ ಮಾತಿಗೂ ಬೆಲೆ ಕೊಡಲಿಲ್ಲ. ನನಗೆ ನಿರಂತರವಾಗಿ ಬೆದರಿಕೆ ಹಾಕಲಾಗುತ್ತಿದೆ ಎಂದು ಲತಾ ಟಂಡನ್ ಆರೋಪಿಸಿದ್ದಾರೆ.