ತಿರುವನಂತಪುರಂ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಕೊರೊನಾ ಹಿನ್ನೆಲೆಯಲ್ಲಿ ಅವರನ್ನು ಕೊಯಿಕ್ಕೋಡ್ನ ಮೆಡಿಕಲ್ ಕಾಲೇಜಿಗೆ ದಾಖಲಿಸಲಾಗಿದೆ.
ವೈದ್ಯರ ಸಲಹೆ ಮೆರೆಗೆ ವಿಜಯನ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕೇರಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಅವರು ಪ್ರಚಾರದಲ್ಲಿ ಭಾಗಿಯಾಗಿದ್ದರು. ಕಳೆದ ಒಂದು ದಿನದ ಹಿಂದೆಯಷ್ಟೇ ಪಿಣರಾಯಿ ವಿಜಯನ್ ಕೋವಿಡ್ ವ್ಯಾಕ್ಸಿನ್ ಸಹ ಪಡೆದುಕೊಂಡಿದ್ದರು. ಈ ಮಧ್ಯೆ ಅವರ ಪುತ್ರಿ ವೀಣಾ ವಿಜಯನ್ ಅವರಿಗೂ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.