ಚೆನ್ನೈ(ತಮಿಳುನಾಡು) :ಹಣದ ಕೊರತೆಯಿಂದ ಜೀವನ ನಡೆಸಲು ಕಷ್ಟವಾಗಿದ್ದಕ್ಕೆ ವ್ಯಕ್ತಿಯೊಬ್ಬ ತನ್ನ ಇಬ್ಬರು ಮಕ್ಕಳು ಮತ್ತು ಪತ್ನಿಯನ್ನು ಪೋರ್ಟಬಲ್ ಎಲೆಕ್ಟ್ರಿಕ್ವುಡ್ ಕಟ್ಟರ್ನಿಂದ ಕತ್ತು ಸೀಳಿ ಕೊಲೆ ಮಾಡಿ, ತಾನೂ ಆತ್ಮಹತ್ಯೆ ಮಾಡಿಕೊಂಡ ಭೀಕರ ಘಟನೆ ಚೆನ್ನೈನಲ್ಲಿ ಶನಿವಾರ ನಡೆದಿದೆ.
ಚೆನ್ನೈನ ಪೊಜಿಚಲೂರ್ನ ನಿವಾಸಿಗಳಾಗಿದ್ದ ಪ್ರಕಾಶ್ (41), ಅವರ ಪತ್ನಿ ಗಾಯತ್ರಿ ಮತ್ತು 13 ಮತ್ತು 9 ವರ್ಷದ ಇಬ್ಬರು ಮಕ್ಕಳು ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಈ ಭೀಕರ ಘಟನೆ ನೆರೆಹೊರೆಯಲ್ಲಿ ಆಘಾತವನ್ನುಂಟು ಮಾಡಿದೆ.
ಕುಟುಂಬಸ್ಥರು ಮನೆಯಿಂದ ಹೊರಬಾರದೇ ಇದ್ದಾಗ ಅನುಮಾನಗೊಂಡ ನೆರೆಹೊರೆಯವರು ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ನಾಲ್ವರೂ ರಕ್ತದ ಮಡುವಿನಲ್ಲಿ ಕತ್ತು ಸೀಳಿಕೊಂಡು ಬಿದ್ದಿರುವುದು ಕಂಡು ಬಂದಿದೆ.
ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ತನಿಖೆ ನಡೆಸಿದಾಗ ಕುಟುಂಬದವರು ಹಣಕಾಸಿನ ಸಮಸ್ಯೆ ಎದುರಿಸುತ್ತಿದ್ದ ಕಾರಣ ಈ ರೀತಿಯ ನಿರ್ಧಾರಕ್ಕೆ ಬಂದಿದ್ದಾರೆ ಎಂದು ತಿಳಿದು ಬಂದಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಓದಿ:ಅಪರಿಚಿತ ಕಾರು ಹಿಟ್ ಅಂಡ್ ರನ್ ; ಇಬ್ಬರು ಸವಾರರು ಸ್ಥಳದಲ್ಲೇ ಸಾವು