ಕರ್ನಾಟಕ

karnataka

ETV Bharat / bharat

ಛತ್ತೀಸ್‌ಗಢದಲ್ಲಿ ಇಬ್ಬರು ನಕ್ಸಲರ ಬೇಟೆಯಾಡಿದ ಭದ್ರತಾ ಪಡೆ

ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಇಬ್ಬರು ನಕ್ಸಲರನ್ನು ಭದ್ರತಾ ಪಡೆ ಹೊಡೆದುರುಳಿಸಿದ್ದು, ಅವರ ಬಳಿ ಇದ್ದ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ.

2 Naxals killed in Sukma
ಛತ್ತೀಸ್‌ಗಢದಲ್ಲಿ ಇಬ್ಬರು ನಕ್ಸಲರ ಹೊಡೆದುರುಳಿಸಿದ ಭದ್ರತಾ ಪಡೆ

By

Published : Aug 24, 2021, 12:02 PM IST

ಸುಕ್ಮಾ (ಛತ್ತೀಸ್‌ಗಢ): ಭದ್ರತಾ ಪಡೆ ಹಾಗೂ ನಕ್ಸಲರ ನಡುವೆ ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ನಕ್ಸಲರನ್ನು ಬೇಟೆಯಾಡಲಾಗಿದೆ ಎಂದು ಪೊಲೀಸ್​ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಕೊಂಟಾ ಪೊಲೀಸ್ ಠಾಣೆ ವ್ಯಾಪ್ತಿಯ ಗೊಂಪಾಡ್ ಮತ್ತು ಕನ್ಹೈಗುಡ ಗ್ರಾಮಗಳ ಬಳಿಯ ಅರಣ್ಯದಲ್ಲಿ ಜಿಲ್ಲಾ ಮೀಸಲು ಸಿಬ್ಬಂದಿ (DRG), ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಮತ್ತು ಕೋಬ್ರಾ ಸಿಬ್ಬಂದಿ ನಕ್ಸಲ್ ವಿರೋಧಿ ಜಂಟಿ ಕಾರ್ಯಾಚರಣೆಯಲ್ಲಿ ತೊಡಗಿದ್ದ ವೇಳೆ ಎನ್​ಕೌಂಟರ್​ ನಡೆದಿದೆ.

ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಮತ್ತೋರ್ವ ಉಗ್ರನ ಹತ್ಯೆ: ಎನ್​ಕೌಂಟರ್ ಮುಂದುವರಿಕೆ

ಎನ್​ಕೌಂಟರ್​ನಲ್ಲಿ ಇಬ್ಬರು ನಕ್ಸಲರನ್ನು ಹೊಡೆದುರುಳಿಸಿ ಅವರ ಬಳಿ ಇದ್ದ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೃತರ ಬಗ್ಗೆ ನಿಖರ ಮಾಹಿತಿಯಿಲ್ಲ. ಆದರೆ ಇವರಲ್ಲಿ ಒಬ್ಬ ಕೊಂಟಾ ಪ್ರದೇಶದ ಸ್ಥಳೀಯ ಮಾವೋವಾದಿ ಸಂಘಟನೆಯ ಕಮಾಂಡರ್ ಎಂದು ಶಂಕಿಸಲಾಗಿದೆ. ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಸುಕ್ಮಾ ಪೊಲೀಸ್ ಅಧೀಕ್ಷಕ ಸುನಿಲ್ ಶರ್ಮಾ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ABOUT THE AUTHOR

...view details