ಛತ್ತೀಸ್ಗಢ: ಕಾಶ್ಮೀರದಲ್ಲಿ ನಡೆಯುತ್ತಿರುವ ಅಮಾಯಕ ಕಾಶ್ಮೀರಿ ಪಂಡಿತರು ಮತ್ತು ಇತರ ಅಲ್ಪಸಂಖ್ಯಾತರ ಉದ್ದೇಶ ಪೂರ್ವಕ ಹತ್ಯೆ ಪ್ರಕರಣದ ಕುರಿತು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಛತ್ತೀಸ್ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್, ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370ನ್ನು ತೆಗೆದುಹಾಕಿದರೂ ಇನ್ನೂ ಯಾಕೆ ಅಲ್ಲಿನ ಪರಿಸ್ಥಿತಿ ಸುಧಾರಿಸಿಲ್ಲ ಎಂದು ಪ್ರಶ್ನಿಸಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370ನ್ನು ತೆಗೆದುಹಾಕಿ ಜಮ್ಮು ಕಾಶ್ಮೀರವನ್ನು ಮೂರು ಭಾಗಗಳಾಗಿ ವಿಂಗಡಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿದ್ದ ಚುನಾಯಿತ ಸರ್ಕಾರವನ್ನು ತೆಗೆದುಹಾಕಿ, ರಾಷ್ಟ್ರಪತಿ ಆಳ್ವಿಕೆ ಸಹ ಹೇರಲಾಗಿದೆ. ಆದರೂ ಇಂದು ಕಾಶ್ಮೀರಿ ಪಂಡಿತರನ್ನು, ಹಿಂದೂಗಳನ್ನು ಹತ್ಯೆ ಮಾಡಲಾಗುತ್ತಿದೆ. 370ನ್ನು ತೆಗೆದುಹಾಕಿದಂತಹ ಉತ್ತಮ ಕೆಲಸ ನಮ್ಮಿಂದಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿಕೊಳ್ಳುತ್ತದೆ. ಹಾಗಾದರೆ ಇದರ ಜವಾಬ್ದಾರಿಯನ್ನು ಯಾರು ತೆಗೆದುಕೊಳ್ಳುತ್ತಾರೆ? ಕೇಂದ್ರ ಸರ್ಕಾರಕ್ಕೆ ಜಮ್ಮು ಕಾಶ್ಮೀರದಲ್ಲಿ ಯಾಕೆ ಭದ್ರತೆ ನೀಡಲು ಸಾಧ್ಯವಾಗುತ್ತಿಲ್ಲ? ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.